ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಮಾಧ್ಯಮಗಳ ಮೂಲಕ ಈಗ ನನಗೆ ಗೊತ್ತಾಯಿತು. ಯಡಿಯೂರಪ್ಪ ಅವರು ಏನು ಹೇಳಿದ್ದಾರೆ ಎಂಬುವುದು ಗೊತ್ತಿಲ್ಲ ಎಂದು ಕೇಂದ್ರ ಕಾನೂನು ಸಚಿವ ಪ್ರಲ್ಹಾದ್ ಜೋಶಿ ಅವರು ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಯಡಿಯೂರಪ್ಪ ಅವರು ಹೇಳಿದ್ದಾರೆಂದರೆ ಅವರಿಗೆ ಹೆಚ್ಚಿನ ವಿವರ ಗೊತ್ತಿರಬಹುದು. ಅವರ ಜೊತೆ ಮಾತನಾಡಿದ ನಂತರ ಈ ಬಗ್ಗೆ ಸ್ಪಷ್ಟನೆ ನೀಡುವುದಾಗಿ ತಿಳಿಸಿದರು.
ಇದನ್ನೂ ಓದಿ : ಖ್ಯಾತ ರಾಜಕೀಯ ವ್ಯಂಗ್ಯಚಿತ್ರಕಾರ ʻಅಜಿತ್ ನಿನನ್ʼ ನಿಧನ
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಚರ್ಚೆ ಮಾಡಿರುವ ವಿಚಾರ ಸಹ ನನಗೆ ಗೊತ್ತಿಲ್ಲ. ಜೆಡಿಎಸ್ ಗೆ ಐದು ಸ್ಥಾನ ಬೇಡಿಕೆ ವಿಚಾರ ಹೈಕಮಾಂಡ್ ಮಟ್ಟದಲ್ಲಿ ಏನು ಚರ್ಚೆ ಆಗಿದೆಯೋ ಅದೂ ಸಹ ಗೊತ್ತಿಲ್ಲ ಎಂದು ಹೇಳಿದರು.
ಮಾಧ್ಯಗಳ ಪ್ರಶ್ನೆಗಳ ಆಧಾರದ ಮೇಲೆ ನನಗೆ ಉತ್ತರ ನೀಡಲು ಸಾಧ್ಯವಿಲ್ಲ. ಅಧಿಕೃತವಾಗಿ ತಿಳಿದುಕೊಂಡ ನಂತರವೇ ಉತ್ತರಿಸುವುದಾಗಿ ಕೇಂದ್ರ ಸಚಿವ ಜೋಶಿ ತಿಳಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಘೋಷಿಸಿರುವ ಯಡಿಯೂರಪ್ಪ..
2024ರ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಾತ್ಯತೀತ ಜನತಾ ದಳ (ಜೆಡಿಎಸ್) ಜೊತೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದರು.
ನಗರದ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸಂತೋಷ ತಂದಿದೆ. ಜೆಡಿಎಸ್ ಗೆ ನಾಲ್ಕು ಸೀಟ್ ಕೊಡಲು ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಮೈತ್ರಿಯಿಂದ ನಮ್ಮಗೆ ಶಕ್ತಿ ಬಂದಿದೆ. ಇದರಿಂದ 25ಕ್ಕೂ ಹೆಚ್ಚು ಸೀಟ್ ಗೆಲ್ಲಲು ನಮಗೆ ಸಹಾಯವಾಗಲಿದೆ ಎಂದಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.