ಮಂಡ್ಯ: ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆ ವಿಚಾರ ಇಲ್ಲ. ಫ್ಲೆಕ್ಸ್ ನಲ್ಲಿ ಅವರವರ ಅಭಿಮಾನಕ್ಕೆ ಫೋಟೋ ಹಾಕಿದ್ದಾರೆ ಅಷ್ಟೇ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿ, ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ಯೋಚನೆ ಮಾಡಿಲ್ಲ. ಬಿಜೆಪಿ ನಾಯಕರು ಸಹ ಈ ಬಗ್ಗೆ ಮಾತನಾಡಿದ್ದಾರೆ ನಾನು ಈ ಬಗ್ಗೆ ನಿರ್ಧಾರ ಮಾಡಿಲ್ಲ ಎಂದರು. ಸಚ್ಚಿದಾನಂದ ಗೆ ನನ್ನ ಬೆಂಬಲ ಇದೆ ಎನ್ನುವುದು ಸೀಕ್ರೆಟ್ ಇಲ್ಲ ಓಪನ್ ಆಗಿ ಘೋಷಣೆ ಮಾಡಿದ್ದೇನೆ. ಹೀಗಾಗಿ ಸಚ್ಚಿ ಬ್ಯಾನರ್ ನಲ್ಲಿ ನನ್ನ ಫೋಟೋ ಹಾಕಿಕೊಂಡಿದ್ದಾರೆ ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಿಕೊಂಡರೆ ನಾನು ಏನು ಮಾಡೋಕೆ ಆಗಲ್ಲ ಎಂದರು.
ಪಕ್ಷಕ್ಕೆ ಸೇರುವ ಪರಿಸ್ಥಿತಿ ಬಂದಾಗ ಹೇಗೆ ಮಾಡಬೇಕೆಂದು ಯೋಚನೆ ಮಾಡ್ತೀನಿ. ಯೋಗೇಶ್ವರ್ ಅವರಿಗೆ ಬಿಜೆಪಿಗೆ ನಾನು ಬರಬೇಕು ಎಂಬ ಆಸೆ ಇದೆ ಅದೇ ರೀತಿ ಹಲವು ನಾಯಕರು ನನ್ನನ್ನು ಮಾತಾಡಿಸಿದ್ದಾರೆ. ಇಲ್ಲಿಯವರೆಗೆ ನಾನು ಆ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ ಜನರು ಪಕ್ಷ ಸೇರ್ಪಡೆ ಬಗ್ಗೆ ನಿರ್ಧಾರ ಮಾಡ್ತಾರೆ ಎಂದು ತಿಳಿಸಿದ್ದಾರೆ.