ರಾಮನಗರ: ತಾಯಿ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಇವತ್ತಿಗೂ ನನ್ನ ಅಭಿಪ್ರಾಯದಲ್ಲಿ ರಾಮನಗರಕ್ಕೆ ಸೂಕ್ತ ಅಭ್ಯರ್ಥಿ ಅಂದ್ರೆ ಅದು ಕುಮಾರಣ್ಣ. ನಮ್ಮ ತಂದೆ ಜನತೆ ಪರವಾಗಿ ಧ್ವನಿ ಎತ್ತಿ ಕೆಲಸ ಮಾಡಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಪಂಚರತ್ನ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿ, ತಾಯಿ ಇದ್ದಕ್ಕಿದ್ದಂತೆ ಘೋಷಣೆ ಮಾಡಿದ್ದಾರೆ. ನಾನು ಕನಸಿನಲ್ಲೂ ಯೋಚನೆ ಮಾಡಿರಲಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ನನ್ನ ಸ್ಪರ್ಧೆ ಪಕ್ಷಕ್ಕೆ ಬಿಟ್ಟ ತೀರ್ಮಾನ. ನನಗೆ ಪಕ್ಷದ ಸಂಘಟನೆ ಜವಾಬ್ದಾರಿ ನೀಡಲಾಗಿದೆ. ಯುವಘಟಕದ ರಾಜ್ಯಾಧ್ಯಕ್ಷನ್ನಾಗಿ ಮಾಡಿದ್ದಾರೆ. ನಾನೂ ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟನೆ ಮಾಡುತ್ತಿದ್ದೇನೆ. ಕುಮಾರಣ್ಣ ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಹಾಗಾಗಿ ರಾಮನಗರ ಜಿಲ್ಲೆಯಾದ್ಯಂತ ಹೆಚ್ಚು ಸಂಚಾರ ಮಾಡ್ತಿದ್ದೇನೆ. ಎರಡೂ ರಾಷ್ಟ್ರೀಯ ಪಕ್ಷಗಳ ಮೇಲೆ ಜನರಿಗೆ ನಂಬಿಕೆ ಇಲ್ಲ ಎಂದರು.
ನನಗೆ ನಿಮ್ಮ ಸೇವೆ ಮಾಡಲು ಅವಕಾಶ ನೀಡಿ ಎಂದು ಬೇಡಿಕೊಂಡರು. ಈ ಹಿಂದೆ ದೇವೇಗೌಡರ ಪರವಾಗಿ ನಿಂತಿದ್ದೀರಿ. ನಂತರ ಎರಡು ಬಾರಿ ಕುಮಾರಸ್ವಾಮಿ ಪರ ನಿಂತಿದ್ದೀರಿ. ಕುಮಾರಣ್ಣನನ್ನು ರಾಜಕೀಯವಾಗಿ ಬೆಳೆಸಿದ್ದೀರಿ. ಈಗ ತಾಯಿ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ನನಗೆ ನಿಮ್ಮ ಸೇವೆ ಮಾಡಲು ಅವಕಾಶ ನೀಡಿ ಎಂದರು.