Sunday, October 1, 2023
spot_img
- Advertisement -spot_img

ನಾನು ‘ಸನಾತನ’ ಧರ್ಮವನ್ನು ಗೌರವಿಸುತ್ತೇನೆ : ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ ಯಾವುದೇ ಹೇಳಿಕೆ ನೀಡಬಾರದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ತಮಿಳುನಾಡಿನ ಜನರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರಿಗೆ ನನ್ನದೊಂದು ವಿನಮ್ರ ವಿನಂತಿ, ಪ್ರತಿಯೊಂದು ಧರ್ಮಕ್ಕೂ ಅದರದೇ ಆದ ಪ್ರತ್ಯೇಕ ಭಾವನೆಗಳಿವೆ. ಭಾರತವು ಜಾತ್ಯತೀತ, ಪ್ರಜಾಪ್ರಭುತ್ವ ರಾಷ್ಟ್ರ. ವಿವಿಧತೆಯಲ್ಲಿ ಏಕತೆ ನಮ್ಮ ಮೂಲವಾಗಿದೆ. ಹಾಗಾಗಿ, ‘ನಾನು ಸನಾತನ ಧರ್ಮವನ್ನು ಗೌರವಿಸುತ್ತೇನೆ’. ದೇವಸ್ಥಾನ, ಮಸೀದಿ, ಚರ್ಚ್ ಗಳಿಗೆ ಎಲ್ಲೆಂದರಲ್ಲಿ ಹೋಗುತ್ತೇವೆ. ಯಾವುದೇ ವರ್ಗಕ್ಕೆ ನೋವುಂಟು ಮಾಡುವ ಯಾವುದೇ ವಿಷಯದಲ್ಲಿ ನಾವು ಭಾಗಿಯಾಗಬಾರದು ಎಂದರು.

ಇದನ್ನೂ ಓದಿ : ‘ಉದಯನಿಧಿ ತಲೆ ಕಡಿದ್ರೆ ₹10 ಕೋಟಿ, ಇಲ್ಲದಿದ್ರೆ ನಾನೇ ಕಡೀತೀನಿ’

ಉದಯನಿಧಿ ಹೇಳಿಕೆಗೆ ‘ಖಂಡನೆ’ ಎಂದು ಹೇಳುವ ಬದಲು ಪ್ರತಿಯೊಬ್ಬರಿಗೂ ನಾನು ವಿನಮ್ರವಾಗಿ ವಿನಂತಿ ಮಾಡುತ್ತೇನೆ ಯಾವುದೇ ದೊಡ್ಡ ಸಮುದಾಯವಾಗಿರಲಿ, ಸಣ್ಣ ಸಮುದಾಯವಾಗಿರಲಿ ಯಾರನ್ನೂ ನೋಯಿಸುವ ಹೇಳಿಕೆಗಳಿಗೆ ನಾವು ಪ್ರತಿಕ್ರಿಯಿಸಬಾರದು. ನಾವು ವಿವಿಧತೆಯಲ್ಲಿ ಏಕತೆಯನ್ನು ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.

‘ಸನಾತನ ನಿರ್ಮೂಲನೆ’ ವಿಷಯದ ಕುರಿತು ತಮಿಳುನಾಡು ಪ್ರಗತಿಪರ ಲೇಖಕರ ಕಲಾವಿದರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಉದಯನಿಧಿ ಸ್ಟಾಲಿನ್, ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು’ ಎಂದಿದ್ದರು. ಈ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles