Wednesday, November 29, 2023
spot_img
- Advertisement -spot_img

ನಾನು ಸದಾ ವಿಜಯೇಂದ್ರ ಜೊತೆಗಿರುತ್ತೇನೆ: ನಳಿನ್ ಕುಮಾರ್ ಕಟೀಲ್

ಬೆಂಗಳೂರು : ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೂತನ ಅಧ್ಯಕ್ಷ ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಎಲ್ಲಾ ಹಿರಿಯ ರಾಷ್ಟ್ರೀಯ ನಾಯಕರು ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆಲ್ಲುವ ಗುರಿ ಇದೆ. ಎಲ್ಲಾ ಹಿರಿಯರ ಮಾರ್ಗದರ್ಶನದಿಂದ ನಾನು 4 ವರ್ಷ 3 ತಿಂಗಳು ರಾಜ್ಯಾಧ್ಯಕ್ಷನಾಗಿ ಅಧಿಕಾರ ನಿರ್ವಹಿಸಿದ್ದೇನೆ. ಬೂತ್ ಮಟ್ಟದ ಎಲ್ಲಾ ಕಾರ್ಯಕರ್ತರು ನನಗೆ ಸಹಕಾರ ನೀಡಿದ್ದಾರೆ. ಎರಡು ಮುಖ್ಯಮಂತ್ರಿಗಳ ಅವಧಿಯಲ್ಲಿ ಕಾರ್ಯ ನಿರ್ವಹಿಸುವ ಅವಕಾಶ ನನಗೆ ಸಿಕ್ಕಿತ್ತು. ಕೊರೊನಾ ಸಮಯದಲ್ಲಿ ಅತ್ಯಂತ ಹೆಚ್ಚು ಕೆಲಸ ಮಾಡಲು ಕಾರ್ಯಕರ್ತರು ನನಗೆ ಶಕ್ತಿಯಾಗಿ ನಿಂತಿದ್ದರು. ಮುಂದೆ ವಿಜಯೇಂದ್ರ ಅವರಿಗೂ ಇದೇ ರೀತಿ ಶಕ್ತಿ ನೀಡಿ ಎಂದರು.

ಇದನ್ನೂ ಓದಿ : ವಿಜಯೇಂದ್ರಗೆ ಅಧಿಕಾರ ಹಸ್ತಾಂತರ ಮಾಡಿದ ನಳಿನ್ ಕುಮಾರ್ ಕಟೀಲ್

ವಿಜಯೇಂದ್ರ ಓರ್ವ ಉತ್ತಮ ಸಂಘಟಕ. ನನ್ನ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಯುವಮೋರ್ಚಾವನ್ನು ಕಟ್ಟಿ ಬೆಳೆಸಿದ್ದಾರೆ. ನಾವು ಮೋದಿಯವರ ಮಾರ್ಗದರ್ಶನ, ಯಡಿಯೂರಪ್ಪ ಅವರ ಪ್ರೇರಣೆಯೊಂದಿಗೆ ಸಾಗೋಣ. ನಾನು ಸದಾ ವಿಜಯೇಂದ್ರ ಜೊತೆ ಇರುತ್ತೇನೆ. ಮತ್ತೊಮ್ಮೆ ವಿಜಯೇಂದ್ರಗೆ ಶುಭಕೋರುತ್ತೇನೆ ಎಂದು ಹೇಳಿದರು.

ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಸಿಎಂಗಳಾದ ಬಿಎಸ್‌ ಯಡಿಯೂರಪ್ಪ, ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೆಎಸ್‌ ಈಶ್ವರಪ್ಪ, ಶ್ರೀರಾಮುಲು, ಸಂಸದರಾದ ಬಿವೈ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರು ಮತ್ತು ಮುಖಂಡರು ಹಾಜರಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles