ಹೈಕಮಾಂಡ್ ಒಪ್ಪಿದ್ರೆ ನಾನೇ ಪೂರ್ಣಾವಧಿಯ ಸಿಎಂ; ರಾಗ ಬದಲಿಸಿದ್ದೇಕೆ ಸಿದ್ದು

ಮಂಗಳೂರು : ಇಷ್ಟು ದಿನ ನಾನೇ ಪೂರ್ಣಾವಧಿ ಸಿಎಂ, 5 ವರ್ಷ ನಾನೇ ಇರುತ್ತೇನೆ ಎನ್ನುತ್ತಿದ್ದ ಸಿದ್ದರಾಮಯ್ಯ ಇದೀಗ ಸ್ವಲ್ಪ ರಾಗ ಬದಲಿಸಿದ್ದಾರೆ. ಹೈಕಮಾಂಡ್ ಒಪ್ಪಿದರೇ, ನಾನೇ ಪೂರ್ಣಾವಧಿ ಸಿಎಂ ಎಂದು ಹೇಳುವ ಮೂಲಕ ಅಧಿಕಾರ ಹಂಚಿಕೆಯ ಹಿಂಟ್‌ ಕೊಟ್ಟಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿ ಇರುವವರನ್ನು ತಪ್ಪಿಸಲು ಆಗಲ್ಲ. ಸ್ಪರ್ಧೆಯಲ್ಲಿ ಇರಬೇಡಿ ಎಂದು ಹೇಳಲು ಆಗಲ್ಲ. ಪ್ರಜಾಪ್ರಭುತ್ವದಲ್ಲಿ ಕೇಳೋದು ಅವರ ಹಕ್ಕು. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೇಳುವ ಕೇಳುವ ಹಕ್ಕು ಎಲ್ಲರಿಗೂ ಇದೆ. ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೀನಿ ಎಂದರು.

ಸದ್ಯ ಸಿದ್ದರಾಮಯ್ಯರ ಹೇಳಿಕೆಯನ್ನ ಗಮನಿಸಿದ್ರೆ ವಿಪಕ್ಷಗಳು ಹೇಳುತ್ತಿದ್ದ ನವೆಂಬರ್‌ ಕ್ರಾಂತಿ ನಡೆಯೋದು ಪಕ್ಕಾ ಎನ್ನಲಾಗುತ್ತಿದೆ. ಈಗ ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತೆ ಎಂಬುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಏನಾದರೂ, ಸಿಎಂ ಸ್ಥಾನದಲ್ಲಿರುವವರನ್ನು ಬದಲಾವಣೆ ಮಾಡಿ ಬೇರೆಯವರನ್ನು ಸಿಎಂ ಸ್ಥಾನದಲ್ಲಿ ಕೂರಿಸುತ್ತಾ?, ಸಿಎಂ ಸ್ಥಾನ ತ್ಯಾಗ ಮಾಡಿ, ಬೇರೆಯವರಿಗೆ ಬಿಟ್ಟುಕೊಡಿ ಎಂದು ಹೇಳುತ್ತದೆಯೇ ಎಂಬುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಮುಂದಿನ ತಿಂಗಳು ಸಿದ್ದರಾಮಯ್ಯ ಅವರು ಸಿಎಂ ಆಗಿ ಎರಡೂವರೆ ವರ್ಷವನ್ನು ಪೂರ್ಣಗೊಳಿಸುತ್ತಿದ್ದಾರೆ. ಹೀಗಾಗಿ ಎರಡೂವರೆ ವರ್ಷ ಪೂರ್ಣಗೊಂಡ ಬಳಿಕ ಸಿಎಂ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ಬೇರೆಯವರಿಗೆ ನೀಡುತ್ತಾ ಇಲ್ಲವೇ ಸಿದ್ದರಾಮಯ್ಯರನ್ನು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರಿಸುತ್ತಾ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿರುವ ವಿಚಾರ..

Leave a Reply

Your email address will not be published. Required fields are marked *