Monday, March 27, 2023
spot_img
- Advertisement -spot_img

ನಾನು 2023ಕ್ಕೆ ಬಿಜೆಪಿಯಿಂದಲೇ ಸ್ಪರ್ಧೆ ಮಾಡ್ತೇನೆ : ಸಿ.ಪಿ.ಯೋಗೇಶ್ವರ್


ರಾಮನಗರ:
ನನಗೆ ಮಾತೃ ಪಕ್ಷ ಬಿಜೆಪಿ, ನಾನು 2023ಕ್ಕೆ ಬಿಜೆಪಿಯಿಂದಲೇ ಸ್ಪರ್ಧೆ ಮಾಡ್ತೇನೆ ಎಂದು ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ. ಕುಮಾರಸ್ವಾಮಿ ಕೂಡ ಬಿಜೆಪಿಗೆ ಧನ್ಯವಾದ ಹೇಳಬೇಕು. ಬಿಜೆಪಿಯಿಂದ ಚನ್ನಪಟ್ಟಣ ಕ್ಷೇತ್ರ ಅಭಿವೃದ್ಧಿ ಆಗಿದ್ದು ಎಂದರು.

ನಮ್ಮ ಕ್ಷೇತ್ರ ಅಭಿವೃದ್ಧಿ ಆಗಿರೋದು ಬಿಜೆಪಿಯಿಂದ. ನನಗೆ ವೈಯಕ್ತಿಕವಾಗಿ ಬಿಜೆಪಿ ಪಕ್ಷದಿಂದ ಹೆಸರುಗಳಿಸಿದ್ದೇನೆ. ಭಾವನಾತ್ಮಕವಾಗಿ ಜನರನ್ನು ಸೆಳೆಯಲು ಹೆಚ್​ಡಿಕೆ ಮುಂದಾಗಿದ್ದಾರೆ. ಹೆಚ್​​ಡಿಕೆ ಜನರಿಗೆ ಸುಳ್ಳು ಆಶ್ವಾಸನೆ ಕೊಟ್ಟು ಮತ ಹಾಕಿಸಿಕೊಂಡಿದ್ದಾರೆ ಎಂದರು.

2023ಕ್ಕೆ ರಾಮನಗರ, ಚನ್ನಪಟ್ಟಣ ಕ್ಷೇತ್ರ ಜನ ತಕ್ಕ ಉತ್ತರ ಕೊಡುತ್ತಾರೆ. ಚುನಾವಣೆ ಬಂದರೆ ಕಣ್ಣೀರು ಹಾಕಿ, ಇದೇ ಕೊನೆ ಚುನಾವಣೆ ಅಂತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ಮಾಡಿದರು.

ಕುಟುಂಬ ರಾಜಕಾರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ವಂಶಪಾರಂಪರ್ಯಕ್ಕೆ ತೀಲಾಂಜಲಿ ಹಾಕೋದೆ ಬಿಜೆಪಿಯ ಅಜೆಂಡಾ. ನಮ್ಮ ಪಕ್ಷದಲ್ಲೂ ಕೆಲವೊಂದು ಸಂದರ್ಭಕ್ಕೆ ಯೋಗ್ಯತೆ ಅನುಗುಣವಾಗಿ ಟಿಕೆಟ್ ಕೊಡುತ್ತಾರೆ. ಆದರೆ ಜೆಡಿಎಸ್ ಪಕ್ಷದಲ್ಲಿ ರಾಜ ಮನೆತನ ರೀತಿ, ಅವರದೇ ಕುಟುಂಬವನ್ನು ಜೆಡಿಎಸ್ ಪಕ್ಷದಲ್ಲಿ ಮುಂದುವರಿಸುತ್ತಾರೆ ಎಂದರು.

Related Articles

- Advertisement -

Latest Articles