ಬೆಂಗಳೂರು: ಇವತ್ತು ನಾನು ಏನಾಗಿದ್ದಿನೋ ನನ್ನ ಎಲ್ಲ ಹುದ್ದೆಗೆ ನಾನು ಕಲಿತಿರೋ ಶಾಲೆಯೇ ಕಾರಣ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಾಗಡಿ ರಸ್ತೆಯ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾಕೇಂದ್ರ ಶಾಲೆಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪಕ್ಷ ಗಟ್ಟಿಯಾಗಿ ಕಟ್ಟಿ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇನೆ, ನಾನು ಕಲಿತ ಈ ಶಾಲೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ನನ್ನ ನಾಯಕತ್ವ ಕೌಶಲ್ಯಕ್ಕೆ ಮತ್ತಷ್ಟು ಮೆರುಗು ನೀಡಲು ಶಾಲೆ ಸಹಕಾರಿಯಾಗಿದೆ ಎಂದು ತಿಳಿಸಿದರು.
ಎಂಟರಿಂದ ಹತ್ತನೇ ತರಗತಿವರೆಗೆ ಜನಸಂಘ ವಿದ್ಯಾಶಾಲೆಯಲ್ಲಿ ವ್ಯಾಸಂಗ ಮಾಡಿದ ಅವರು, ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಇನ್ನೂ ಕಾರ್ಯಕ್ರಮದಲ್ಲಿ ಸ್ನೇಹಿತರು ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮರುನಿರ್ಮಾಣ ಮಾಡಲು ವಿಜಯೇಂದ್ರರವರ ಜೊತೆಗೆ ಕೈ ಜೋಡಿಸುತ್ತೇವೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ : ಡಾ.ಯತೀಂದ್ರ ವಿಡಿಯೋ ವೈರಲ್ ವಿಚಾರ: ‘AI ಟೆಕ್ನಾಲಜಿ ಬಂದಿದೆ ಏನ್ ಬೇಕಾದ್ರು ಆಗಬಹುದು’
ಇನ್ನೂ ವಿಜಯೇಂದ್ರ ವಿದ್ಯಾರ್ಥಿಯಾಗಿದ್ದಾಗ ಅನೇಕ ನಾಯಕತ್ವ ಸ್ಥಾನ ಹೊಂದಿದ್ದರು ಎಂದು ಶಾಲೆಯ ನೆನಪುಗಳನ್ನು ಹಂಚಿಕೊಂಡರು. ಇದೇ ವೇಳೆ 70 ವರ್ಷದ ರಾಮಚಂದ್ರ ಭಟ್ ಕೋಟೆಮನೆ ಗುರುಗಳಾಗಿದ್ದರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೂತನ ನೇಮಕಕ್ಕೆ ಅಭಿನಂದನೆ ಸಲ್ಲಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.