ಬೆಂಗಳೂರು : ಬಿಜೆಪಿ ಬಿಟ್ರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಹೊರತು ಬೇರೆ ಪಕ್ಷಗಳಿಗೆ ಹೋಗುವುದಿಲ್ಲ ಎಂದು ಎಂದು ಮಾಜಿ ಸಚಿವ ಬೈರತಿ ಬಸವರಾಜ್ ಹೇಳಿದರು.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷ ನನಗೆ ಅನೇಕ ಅವಕಾಶಗಳನ್ನು ಕೊಟ್ಟಿದೆ. ನಾನು ಪಕ್ಷದಲ್ಲೇ ಇದ್ದೇನೆ. ಯಾವುದೇ ಕಾರಣಕ್ಕೆ ಪಕ್ಷ ಬಿಡುವುದಿಲ್ಲ. ಆದರೆ, ನಾನು ಪಕ್ಷ ತೊರೆಯುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗ್ತಿದೆ ಎಂದರು.
ಇದನ್ನೂ ಓದಿ : ʼನಾನು ಜೆಡಿಎಸ್ ಬಿಟ್ಟು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲʼ
ಎಸ್.ಟಿ ಸೋಮಶೇಖರ್ ಅವರಿಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿದೆ ಎನ್ನಲಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಇದುವರೆಗೆ ಯಾರ ಹತ್ರನೂ ಮಾತನಾಡಿಲ್ಲ. ನನಗೆ ಕಾಂಗ್ರೆಸ್ ನಿಂದ ಯಾವುದೇ ಆಹ್ವಾನ ಬಂದಿಲ್ಲ. ನನಗೆ ಯಾರೂ ಪೋನ್ ಮಾಡಿಲ್ಲ. ಸುಮ್ಮನೆ ಗೊಂದಲ ಸೃಷ್ಟಿ ಮಾಡಬಾರದು. ಇದಕ್ಕೆಲ್ಲ ಇವತ್ತೆ ತೆರೆ ಎಳೆಯುವ ಕೆಲಸ ಆಗಬೇಕು. ಸೋಮಶೇಖರ್ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ಸುಳ್ಳು ಸುದ್ದಿ ಹಬ್ಬಬೇಡಿ-ಆರ್ ಅಶೋಕ್ :
ಪದೇ ಪದೇ ಸುಳ್ಳು ಸುದ್ದಿ ಹಬ್ಬಿಸಬಾರದು. ಯಡಿಯೂರಪ್ಪನವರ ಮನೆಯಲ್ಲಿ ಸಭೆ ನಡೆದಾಗ ಬಸವರಾಜು ಅವರು ಪ್ರವಾಸದಲ್ಲಿದ್ದಾರೆ. ಅವರನ್ನು ನಾನೇ ಕರೆದುಕೊಂಡು ಬರುತ್ತೇನೆ ಎಂದು ಹೇಳಿದ್ದೆ. ಈಗ ಕರೆದುಕೊಂಡು ಬಂದಿದ್ದೇನೆ. ಎಲ್ಲಾ ವದಂತಿಗಳಿಗೆ ಬಸವರಾಜು ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.