ದಾವಣಗೆರೆ: ಕಮಿಷನ್ ವಿಚಾರದಲ್ಲಿ ನನ್ನ ಹಾಗೂ ಆರೋಗ್ಯ ಸಚಿವ ಸುಧಾಕರ್ ವಿರುದ್ಧ ಅನಗತ್ಯ ಆರೋಪ ಮಾಡಲಾಗುತ್ತಿದೆ. ನಾನು ಕಮಿಷನ್ ತೆಗೆದುಕೊಂಡಿರುವುದನ್ನು ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಬೇಕಾದರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡುತ್ತೇನೆ. ಅವರೂ ಪ್ರಮಾಣ ಮಾಡಲಿ. ಇದಕ್ಕಾಗಿ ಅವರು ಎಲ್ಲಿಗೆ ಕರೆಯುತ್ತಾರೋ ಅಲ್ಲಿಗೆ ಹೋಗಲು ರೆಡಿ ಎಂದು ಸವಾಲೆಸೆದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿ ಬಿಜೆಪಿಗೆ ಹೋಗಿಲ್ಲ. ಸ್ವಾಭಿಮಾನಕ್ಕೋಸ್ಕರ ಪಕ್ಷ ಬಿಟ್ಟಿದ್ದೆವು. 40 ಪರ್ಸೆಂಟ್ ಕಮಿಷನ್ ವಿಚಾರದಲ್ಲಿ ಸಿದ್ದರಾಮಯ್ಯನವರು ಬರೀ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡಲು ಹೊರಟಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.
ಸುಖಾಸುಮ್ಮನೆ ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್ ಬಗ್ಗೆ ಆರೋಪ ಮಾಡಲಾಗುತ್ತಿದೆ ನಮ್ಮ 70 ಶಾಸಕರು ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಬೇಡ ಎಂದು ಸಹಿ ಹಾಕಿರುವುದು ನನಗೆ ಗೊತ್ತಿಲ್ಲ. ಸಾಮೂಹಿಕ ನಾಯಕತ್ವ, ರಾಜ್ಯದ ಹಿರಿಯ ನಾಯಕರ ನೇತೃತ್ವದಲ್ಲಿ ಚುನಾವಣೆ ಮಾಡುತ್ತೇವೆ ಎಂದು ಹೇಳಿದರು.
ನಾವು ಯಾರೂ ಹೋಗುವುದಿಲ್ಲ. ಯಾರೋ ಒಂದಿಬ್ಬರು ಹೋಗುವುದಾಗಿ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಪಕ್ಷ ಬಿಟ್ಟು ಹೋಗುವುದಿಲ್ಲ. ನನಗೆ ಅಧಿಕಾರ ಮುಖ್ಯವಲ್ಲ. ಎಲ್ಲಿ ಗೌರವ ಇದೆಯೋ ಅಲ್ಲಿ ನಾವಿರುತ್ತೇವೆ ಎಂದರು.