Monday, December 11, 2023
spot_img
- Advertisement -spot_img

ವಿಶ್ವಕಪ್ ಗ್ರ್ಯಾಂಡ್ ಫಿನಾಲೆಗೆ ಸಜ್ಜಾಗಿದೆ ವೇದಿಕೆ: ಪಂದ್ಯ ವೀಕ್ಷಿಸಲಿದ್ದಾರೆ ಪಿಎಂ ಮೋದಿ

ನವದೆಹಲಿ: ಐಸಿಸಿ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೋಡಿಯಂ ಸಕಲ ರೀತಿಯಲ್ಲಿ ಸಜ್ಜಾಗಿದೆ. ಭಾನುವಾರ(ನ.19) ನಡೆಯುವ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಗುಜರಾತಿಗೆ ತೆರಳಲಿದ್ದಾರೆ, ಭಾರತೀಯ ವಾಯುಪಡೆಯ ವೈಮಾನಿಕ ಪ್ರದರ್ಶನ, ಮತ್ತೆ ಕ್ರಿಕೆಟ್ ದಿಗ್ಗಜರಾದ ಕಪಿಲ್ ದೇವ್ ಮತ್ತು ಎಂ. ಎಸ್. ಧೋನಿ ಹೀಗೆ ಕ್ರೀಡಾ ತಾರೆಯರು, ಬಾಲಿವುಡ್ ನಟ ನಟಿಯರು ಭಾಗವಹಿಸಲಿದ್ದಾರೆ.

ಬಾಲಿವುಡ್ ಸಂಗೀತ ನಿರ್ದೇಶಕ ಪ್ರೀತಮ್, ಗಾಯಕಿ ಜೋನಿತಾ ಗಾಂಧಿ ಮತ್ತು ಪ್ರಸ್ತುತ ಕೋಕ್ ಸ್ಟುಡಿಯೋದ ಗುಜರಾತಿ ಗಾಯಕ ‘ಗೋಟಿಲೋ’ ಖ್ಯಾತಿಯ ಆದಿತ್ಯ ಗಾಧವಿ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಟಾಸ್‌ಗೆ ಮುನ್ನ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇನಿಂಗ್ಸ್ ವಿರಾಮದಲ್ಲಿ ಮನರಂಜನೆಗಾಗಿ ಮುಂಬೈನಿಂದ 500 ನೃತ್ಯಗಾರರು ಪ್ರದರ್ಶನ ನೀಡಲಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾವನ್ನು ಕೇಸರೀಕರಣಗೊಳಿಸಲಾಗ್ತಿದೆ: ಕೇಂದ್ರದ ವಿರುದ್ಧ ದೀದಿ ಕಿಡಿ

ಮುಂಬೈನ ವಾಂಖೆಡೆಯಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಸೆಮಿ ಫೈನಲ್‌ನಲ್ಲಿ 70 ರನ್‌ಗಳಿಂದ ಗೆದ್ದು ಫೈನಲ್ ಪ್ರವೇಶಿಸಿರುವ ಟೀಂ ಇಂಡಿಯಾ ಪ್ರಶಸ್ತಿ ಸುತ್ತಿನಲ್ಲಿ ಆಸ್ಟ್ರೇಲಿಯಾ ಅಥವಾ ದಕ್ಷಿಣ ಆಫ್ರಿಕಾ ಎರಡು ತಂಡಗಳ ಪೈಕಿ ಯಾರಾಗಲಿದ್ದಾರೆ ತನ್ನ ಎದುರಾಳಿ ಎಂಬುದನ್ನು ಕಾದು ನೋಡುತ್ತಿದೆ. ನವೆಂಬರ್ 19ರ ಭಾನುವಾರ ಫೈನಲ್ ಹಣಾಹಣಿ ನಡೆಯಲಿದೆ.

ಈ ನಡುವೆ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇದೇ ವರ್ಷ ನಡೆದಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ಮೋದಿ ಅವರು ಆಗಮಿಸಿದ್ದರು. ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಕೂಡ ಭಾಗವಹಿಸಿದ್ದರು. ಟೆಸ್ಟ್ ಪಂದ್ಯದ ಮೊದಲ ದಿನದಾಟಕ್ಕೆ ಇಬ್ಬರು ಪ್ರಧಾನಿಗಳು ಸಾಕ್ಷಿಯಾಗಿದ್ದರು.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಶೇ.73ರಷ್ಟು, ಛತ್ತೀಸಗಢದಲ್ಲಿ ಶೇ.68.15ರಷ್ಟು ಮತದಾನ!

ಟೀಂ ಇಂಡಿಯಾ ವಿರುದ್ಧ ಫೈನಲ್ ಫೈಟ್ ಯಾರ ಜೊತೆ?

ಕೋಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಎರಡನೇ ಸೆಮಿ ಫೈನಲ್ ಪಂದ್ಯ ನಡೆಯುತ್ತಿದ್ದು, ಇಲ್ಲಿ ಗೆಲ್ಲುವ ತಂಡ ಟೀಂ ಇಂಡಿಯಾ ವಿರುದ್ಧ ಸೆಮಿ ಫೈನಲ್ ಪಂದ್ಯವನ್ನು ಆಡಲಿದೆ. 2011ರಲ್ಲಿ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಧೋನಿ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದೀಗ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ವಿಶ್ವಕಪ್ ಮುಡಿಗೇರಿಸಿಕೊಳ್ಳಲಿದೆ ಎಂದು ಕೋಟಿ ಕೋಟಿ ಭಾರತೀಯ ನಿರೀಕ್ಷೆಯಾಗಿದೆ.ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮಾಜಿ ಕ್ರಿಕೆಟರ್ ಎಂಎಸ್ ಧೋನಿ ಅವರು ಕೂಡ ಸಾಕ್ಷಿಯಾಗಲಿದೆ ಎಂದು ವರದಿಯಾಗಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles