ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ಇದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಏಪ್ರಿಲ್ 13ರವರೆಗೆ ವಿಸ್ತರಿಸಿದೆ.
ಸಿಬಿಐ ತನಿಖೆಗೆ ಅನುಮತಿ ಹಾಗೂ ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್ಗೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ಸದ್ಯ ವಿಚಾರಣೆ ನಡೆಸಿದ ಕೋರ್ಟ್ ಎರಡೂ ಅರ್ಜಿಗಳ ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿದೆ. ಸದ್ಯ ಡಿಕೆ ಶಿವಕುಮಾರ್ ನಿರಾಳರಾಗಿದ್ದಾರೆ. ಸಿಬಿಐ ತನಿಖೆ ರದ್ದು ಕೋರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.
ಕಾಲಾವಕಾಶದ ಕೊರತೆಯಿಂದ ಅರ್ಜಿ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿದ ಪೀಠ ಸಿಬಿಐ ತನಿಖೆಗೆ ನೀಡಿರುವ ತಡೆಯಾಜ್ಞೆಯನ್ನು ವಿಸ್ತರಿಸಿತು. ಮಾರ್ಚ್ 31ರಂದು ನಡೆದ ವಿಚಾರಣೆ ವೇಳೆ ಸಿಬಿಐ ತನಿಖೆಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿರುವ ಶಿವಕುಮಾರ್ ಅವರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ವಕೀಲರು ಮನವಿ ಮಾಡಿದ್ದರು.
ಆರಂಭದಲ್ಲಿ ಸುಮ್ನಿದ್ದ ಕೋರ್ಟ್, ನಂತರ ಏಪ್ರಿಲ್ 6ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು. ಅದರಂತೆ ಇಂದು ವಿಚಾರಣೆ ವೇಳೆ ಮತ್ತೊಮ್ಮೆ ತಡೆಯಾಜ್ಞೆ ವಿಸ್ತರಣೆ ಮಾಡಲಾಗಿದೆ.