ಯಾದಗಿರಿ : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದಾರೆ.


ಜಿಲ್ಲೆಯ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇಲ್ಲಿ ವಿವಿಧ ತುಕಡಿಗಳಿಂದ ಗೌರವ ಪಡೆದು ಪರೇಡ್ ವೀಕ್ಷಿಸಿದ ಸಚಿವ ದರ್ಶನಾಪುರ, ಹೈದರಾಬಾದ್ ಕರ್ನಾಟಕ ವಿಮೋಚನಾ ದಿನವನ್ನು ಕಲ್ಯಾಣ ಕರ್ನಾಟಕ ಉತ್ಸವ ದಿನವೆಂದು ಆಚರಿಸುತ್ತಿದ್ದೇವೆ. 1947ರ ಆಗಷ್ಟ್ 15ರಂದು ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ ಸಹ ಕಲ್ಯಾಣ ಕರ್ನಾಟಕ ಭಾಗದ 8 ಜಿಲ್ಲೆಗಳು ನಿಜಾಮರ ಆಳ್ವಿಕೆಯಲ್ಲಿತ್ತು. ನಂತರ 1948ರ ಸೆಪ್ಟೆಂಬರ್ 17 ರಂದು ಒಂದು ವರ್ಷದ ಒಂದು ದಿನದ ಬಳಿಕ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಸಿಕ್ತು. ಸ್ವಾತಂತ್ರ್ಯ ಸಿಕ್ಕ ದಿನದ ಅಂಗವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದೆ. ಸ್ವಾತಂತ್ರ್ಯ ಸಿಕ್ಕ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ : ಹಿಂದುತ್ವ ಸರ್ವರ ಧರ್ಮ, ಅದರ ಬೆಂಬಲಿಗರೆಲ್ಲಾ ಬಿಜೆಪಿಯವರಲ್ಲ : ಛಲವಾದಿ ನಾರಾಯಣಸ್ವಾಮಿ


ಕಾರ್ಯಕ್ರಮದಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು, ಎಂಎಲ್ ಸಿ ಛಲವಾದಿ ನಾರಾಯಣಸ್ವಾಮಿ, ಡಿಸಿ ಡಾ. ಸುಶೀಲ ಬಿ., ಜಿಪಂ ಸಿಇಓ ಗರೀಮಾ ಪನ್ವಾರ್, ಎಸ್ಪಿ ಜಿ. ಸಂಗೀತಾ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ : ʼಕಲ್ಯಾಣ ಕರ್ನಾಟಕʼ ಕಳೆಗಟ್ಟಲು ಕರೆ ಕೊಟ್ಟ ಸಿಎಂ