ಚೆನ್ನೈ : ‘ಸನಾತನ ಧರ್ಮದ ವಿರುದ್ಧ ಹೋರಾಡುವ ಸಲುವಾಗಿಯೇ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಲಾಗಿದೆ’ ಎಂದು ಡಿಎಂಕೆ ಸಚಿವ ಕೆ. ಪೊನ್ಮುಡಿ ಹೇಳಿರುವ ವಿಡಿಯೋ ಕ್ಲಿಪ್ ಸೋಮವಾರ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದೆ.
ಡಿಎಂಕೆ ಸರ್ಕಾರದ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಅವರು ‘ಸನಾತನ ಧರ್ಮದ ವಿರುದ್ಧ ಹೋರಾಡಲು’ ವಿಪಕ್ಷಗಳ ಇಂಡಿಯಾ ಒಕ್ಕೂಟ ರಚಿಸಲಾಗಿದೆ ಎಂದಿದ್ದಾರೆ. ಗಮನಾರ್ಹ ವಿಷಯವೆಂದರೆ, ಸಚಿವ ಉದಯನಿಧಿ ಸ್ಟಾಲಿನ್ ಸನಾತನದ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಕೆ ಮಾಡಿದ್ದ ವೇದಿಕೆಯಲ್ಲೇ, ಸಚಿವ ಕೆ. ಪೊನ್ಮುಡಿಯೂ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಸನಾತನ ಧರ್ಮ ಅಂದರೆ ಬದಲಾದ ಧರ್ಮ: ಪ್ರಕಾಶ್ ರೈ
ಸೆಪ್ಟೆಂಬರ್ 2ರಂದು, ‘ಸನಾತನ ನಿರ್ಮೂಲನೆ’ ವಿಷಯದ ಕುರಿತು ತಮಿಳುನಾಡು ಪ್ರಗತಿಪರ ಲೇಖಕರ ಕಲಾವಿದರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಉದಯನಿಧಿ ಸ್ಟಾಲಿನ್, ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು’ ಎಂದಿದ್ದರು. ಈ ಹೇಳಿಕೆ ವಿವಾದದ ಕಿಡಿ ಹೊತ್ತಿಸಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.