ನವದೆಹಲಿ : ಖಲಿಸ್ತಾನಿ ಗುಂಪಿನ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜಾರ್ ಸಾವಿನ ವಿಷಯಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಕೆನಡಾ ನಡುವಿನ ಶೀತಲ ಸಮರ ತೀವ್ರಗೊಂಡಿದೆ.
ಹರ್ದೀಪ್ ಸಿಂಗ್ ನಿಜ್ಜಾರ್ ಸಾವಿನ ಹಿಂದೆ ಭಾರತದ ಕೈವಾಡ ಇದೆ ಎಂದು ಆರೋಪಿಸಿ ಕೆನಡಾ ಭಾರತದ ಗುಪ್ತಚರ ಅಧಿಕಾರಿಯನ್ನು ಉಚ್ಚಾಟಿಸಿದ ಬೆನ್ನಲ್ಲೇ, ಭಾರತದ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟನೆ ಮಾಡಿದೆ.
ಇದನ್ನೂ ಓದಿ : ಖಲಿಸ್ತಾನಿ ಮುಖ್ಯಸ್ಥನ ಹತ್ಯೆ : ಕೆನಡಾ ಆರೋಪ ತಳ್ಳಿ ಹಾಕಿದ ಭಾರತ
ಈ ಕುರಿತು ಪ್ರಕಟಣೆ ಹೊರಡಿಸಿರುವ ವಿದೇಶಾಂಗ ಇಲಾಖೆ, ಭಾರತದಲ್ಲಿರುವ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕರೆಸಿಕೊಳ್ಳಲಾಗಿತ್ತು. ಮುಂದಿನ ಐದು ದಿನಗಳ ಒಳಗೆ ಭಾರತ ತೊರೆಯುವಂತೆ ಅವರಿಗೆ ಸೂಚಿಸಲಾಗಿದೆ. ಭಾರತದ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮತ್ತು ಭಾರತ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.
ಹರ್ದೀಪ್ ಸಿಂಗ್ ನಿಜ್ಜಾರ್ ಸಾವಿನ ಹಿಂದೆ ಭಾರತದ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿರುವ ಕೆನಡಾ ಸರ್ಕಾರ, ಅಲ್ಲಿನ ಭಾರತದ ವಿದೇಶಿ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಮುಖ್ಯಸ್ಥ ಪವನ್ ಕುಮಾರ್ ರೈ ಅವರನ್ನು ಉಚ್ಚಾಟನೆ ಮಾಡಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.