ಮುಂಬೈ : ‘ಇಂಡಿಯಾ’ ಒಕ್ಕೂಟದಲ್ಲಿ ಪ್ರಧಾನಿ ಅಭ್ಯರ್ಥಿಯಾಗಲು ಹಲವು ಮುಖಗಳಿವೆ. ಆದರೆ, ಎನ್ ಡಿಎಗೆ ಆಯ್ಕೆಗಳಿಲ್ಲ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಲೇವಡಿ ಮಾಡಿದ್ದಾರೆ.
ಬುಧವಾರ ಇಂಡಿಯಾ ಒಕ್ಕೂಟದ ಮೂರನೇ ಸಭೆ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಅಭ್ಯರ್ಥಿ ಬಗ್ಗೆ ಕೇಳಿದರೆ ಕಳೆದ 9 ವರ್ಷಗಳಿಂದ ಬಿಜೆಪಿಯವರಿಗೆ ಇರುವುದು ಒಂದೇ ಆಯ್ಕೆ ಎಂದರು.
ಕೇಂದ್ರ ಸರ್ಕಾರ ಗ್ಯಾಸ್ ಬೆಲೆ ಇಳಿಕೆ ಮಾಡಿರುವುದು ರಕ್ಷಾ ಬಂಧನ ಉಡುಗೊರೆ ಎಂಬುವುದರ ಬಗ್ಗೆ ಪ್ರತಿಕ್ರಿಯಿಸಿದ ಉದ್ಧವ್ ಠಾಕ್ರೆ, ಕಳೆದ 9 ವರ್ಷಗಳಲ್ಲಿ ರಕ್ಷಾ ಬಂಧನ ಇರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಉದ್ಧವ್ ಠಾಕ್ರೆಗೆ ʼರಾಖಿʼ ಕಟ್ಟಿದ ಮಮತಾ ಬ್ಯಾನರ್ಜಿ
ಇಂದು ಮತ್ತು ನಾಳೆ (ಆಗಸ್ಟ್ 31-ಸೆಪ್ಟೆಂಬರ್ 1) ಮುಂಬೈನ ಗ್ರ್ಯಾಂಡ್ ಹಯಾತ್ ಹೋಟೆಲ್‌ನಲ್ಲಿ ನಡೆಯಲಿರುವ ವಿಪಕ್ಷ ಮೈತ್ರಿಕೂಟ ‘ಇಂಡಿಯಾ’ದ ಮೂರನೇ ಸಭೆಯಲ್ಲಿ ಒಟ್ಟು 28 ರಾಜಕೀಯ ಪಕ್ಷಗಳು ಭಾಗವಹಿಸಲಿವೆ. ಈ ಪಕ್ಷಗಳ 63 ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೂರನೇ ಸಭೆಯಲ್ಲಿ ಇಂಡಿಯಾ ಒಕ್ಕೂಟದ ಹೊಸ ಲೋಗೋ ಬಿಡುಗಡೆಯಾಗಲಿದೆ. ಸಮನ್ವಯ ಸಮಿತಿಗೆ ಅಧ್ಯಕ್ಷರ ಆಯ್ಕೆ ನಡೆಯಲಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.