Sunday, September 24, 2023
spot_img
- Advertisement -spot_img

ಖಲಿಸ್ತಾನಿ ಮುಖ್ಯಸ್ಥನ ಹತ್ಯೆ : ಕೆನಡಾ ಆರೋಪ ತಳ್ಳಿ ಹಾಕಿದ ಭಾರತ

ನವದೆಹಲಿ : ಖಲಿಸ್ತಾನಿ ಗುಂಪಿನ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜಾರ್ ಸಾವಿನ ಹಿಂದೆ ಭಾರತದ ಕೈವಾಡ ಇದೆ ಎಂಬ ಕೆನಡಾ ಸರ್ಕಾರದ ಆರೋಪವನ್ನು ಕೇಂದ್ರ ವಿದೇಶಾಂಗ ಇಲಾಖೆ ತಳ್ಳಿ ಹಾಕಿದೆ.

“ಕೆನಡಾ ಪ್ರಧಾನಿ ಮತ್ತು ವಿದೇಶಾಂಗ ಸಚಿವರ ಹೇಳಿಕೆಗಳನ್ನು ನಾವು ಗಮನಿಸಿದ್ದೇವೆ. ಈ ಹೇಳಿಕೆಗಳನ್ನು ನಾವು ತಿರಸ್ಕರಿಸುತ್ತೇವೆ. ಕೆನಡಾದ ಯಾವುದೇ ಹಿಂಸಾಚಾರದಲ್ಲಿ ಭಾರತ ಭಾಗಿಯಾಗಿದೆ ಎಂಬ ಆರೋಪ ಅಸಂಬದ್ಧ ಮತ್ತು ಪ್ರಚೋದನಕಾರಿಯಾಗಿದೆ. ಭಾರತವು ಕಾನೂನಿನ ಮೇಲೆ ಬಲವಾದ ನಂಬಿಕೆ ಹೊಂದಿರುವ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ” ಎಂದು ವಿದೇಶಾಂಗ ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಖಲಿಸ್ತಾನಿ ಮುಖ್ಯಸ್ಥನ ಹತ್ಯೆ ಆರೋಪ : ಭಾರತದ ಗುಪ್ತಚರ ಅಧಿಕಾರಿಯನ್ನು ಉಚ್ಚಾಟಿಸಿದ ಕೆನಡಾ

ಆಧಾರ ರಹಿತ ಆರೋಪಗಳು ಕೆನಡಾದಲ್ಲಿ ಆಶ್ರಯ ಪಡೆದಿರುವ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತಿರುವ ಖಲಿಸ್ತಾನಿ ಭಯೋತ್ಪಾದಕರ ಗಮನ ಬೇರೆಡೆಗೆ ಸೆಳೆಯುವ ಸಾಧ್ಯತೆ ಇದೆ. ಭಯೋತ್ಪಾದಕರ ವಿಷಯದಲ್ಲಿ ಕೆನಡಾ ಸರ್ಕಾರದ ಮೌನ ಆತಂಕಾರಿಯಾಗಿದೆ. ಕೆನಡಾದ ರಾಜಕಾರಣಿಗಳು ಭಯೋತ್ಪಾದಕರ ಮೇಲೆ ಸಹಾನುಭೂತಿ ತೋರುತ್ತಿರುವುದು ಕೂಡ ಆಘಾತಕಾರಿಯಾಗಿದೆ. ಕೊಲೆ, ಮಾನವ ಕಳ್ಳಸಾಗಣೆ ಮತ್ತು ಸಂಘಟಿತ ಅಪರಾಧ ಸೇರಿದಂತೆ ಹಲವಾರು ಕಾನೂನುಬಾಹಿರ ಚಟುವಟಿಕೆಗಳಿಗೆ ಕೆನಡಾದಲ್ಲಿ ಜಾಗವನ್ನು ನೀಡಲಾಗಿದೆ.ಇಂತಹ ವಿಚಾರಗಳಲ್ಲಿ ಭಾರತವನ್ನು ಸಿಲುಕಿಸುವ ಪ್ರಯತ್ನವನ್ನು ನಾವು ಖಂಡಿಸುತ್ತೇವೆ. ಕೆನಡಾ ಸರ್ಕಾರವು ತಮ್ಮ ನೆಲದಲ್ಲಿ ನಡೆಯುತ್ತಿರುವ ಎಲ್ಲಾ ಭಾರತ ವಿರೋಧಿ ಚಟುವಟಿಕೆಗಳ ವಿರುದ್ಧ ತ್ವರಿತ ಮತ್ತು ಪರಿಣಾಮಕಾರಿ ಕಾನೂನು ಕ್ರಮವನ್ನು ತೆಗೆದುಕೊಳ್ಳುವಂತೆ ನಾವು ಒತ್ತಾಯಿಸುತ್ತೇವೆ” ಎಂದು ಭಾರತೀಯ ವಿದೇಶಾಂಗ ಇಲಾಖೆ ಕೆನಡಾಗೆ ಖಡಕ್ ಪ್ರತಿಕ್ರಿಯೆ ಕೊಟ್ಟಿದೆ.

ಹರ್ದೀಪ್ ಸಿಂಗ್ ನಿಜ್ಜಾರ್ ಸಾವಿನ ಹಿಂದೆ ಭಾರತದ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿರುವ ಕೆನಡಾ ಸರ್ಕಾರ, ಅಲ್ಲಿನ ಭಾರತದ ವಿದೇಶಿ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಮುಖ್ಯಸ್ಥ ಪವನ್ ಕುಮಾರ್ ರೈ ಅವರನ್ನು ಉಚ್ಚಾಟನೆ ಮಾಡಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles