Sunday, October 1, 2023
spot_img
- Advertisement -spot_img

ಭಾರತ-ಸೌದಿ ನಡುವೆ ದ್ವಿಪಕ್ಷೀಯ ಮಾತುಕತೆ; ಹಲವು ಒಪ್ಪಂದಕ್ಕೆ ಸಹಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಸೋಮವಾರ ದೆಹಲಿಯಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿಯ ಮೊದಲ ಸಭೆ ನಡೆಸಿದರು. ಈ ವೇಳೆ ಉಭಯ ರಾಷ್ಟ್ರಗಳು ದ್ವಿಪಕ್ಷೀಯ ಸಹಕಾರ ಸಂಬಂಧ ಹಲವು ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಇಂಧನ ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಆರೋಗ್ಯ ರಕ್ಷಣೆ, ಆಹಾರ ಭದ್ರತೆ ಸೇರಿದಂತೆ ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳ ಕುರಿತು ಉಭಯ ನಾಯಕರು ಚರ್ಚಿಸಿದ್ದು, ಈ ವಲಯಗಳ ಅಭಿವೃದ್ಧಿಗಾಗಿ ಹಲವು ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಇದನ್ನೂ ಓದಿ: ‘ಬಿಜೆಪಿ ವಿಷಕಾರಿ ಹಾವು..ಎಐಎಡಿಎಂಕೆ ಹಾವಿಗೆ ಆಶ್ರಯ ನೀಡುವ ಕಸ’; ಉದಯನಿಧಿ ಸ್ಟಾಲಿನ್

ಸೌದಿ ಕ್ರೌನ್ ಪ್ರಿನ್ಸ್ ಫೆಬ್ರವರಿ 2019 ರಿಂದ ಭಾರತಕ್ಕೆ ಎರಡನೇ ಬಾರಿ ಭೇಟಿಯಾಗಿದ್ದಾರೆ. ಅವರು G20 ಶೃಂಗಸಭೆಗಾಗಿ ಸೆಪ್ಟೆಂಬರ್ 8ರಂದು ದೆಹಲಿಗೆ ಆಗಮಿಸಿದ್ದರು. ಶೃಂಗಸಭೆ ಬಳಿಕ ಪ್ರಧಾನಿ ಮೋದಿ ಅವರ ಜೊತೆಗಿನ ದ್ವಿಪಕ್ಷೀಯ ಮಾತುಕತೆಗಾಗಿ ತಮ್ಮ ವಾಸ್ತವ್ಯ ವಿಸ್ತರಿಸಿದರು.

ಎಂಒಯುಗಳನ್ನು ಇನ್ವೆಸ್ಟ್ ಇಂಡಿಯಾ ಹಾಗೂ ಸೌದಿ ಅರೇಬಿಯಾದ ಹೂಡಿಕೆ ಸಚಿವಾಲಯ ಸುಗಮಗೊಳಿಸಿದ್ದು ಜಿ-20 ಸಭೆ ಬಳಿಕ ನಡೆದ ಸಭೆಯಲ್ಲಿ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ನಮ್ಮ ದೇಶಗಳು, ಜಿ 20 ದೇಶಗಳು ಮತ್ತು ಇಡೀ ಜಗತ್ತಿಗೆ ಪ್ರಯೋಜನವನ್ನು ತರುವಂತಹ ಬಹಳಷ್ಟು ಘೋಷಣೆಗಳನ್ನು ಮಾಡಲಾಗಿದೆ. ಹಾಗಾಗಿ ಅತ್ಯುತ್ತಮ ಸಭೆ ನಡೆಸಲಾಗಿದೆ ಎಂದು ಭಾರತಕ್ಕೆ ಹೇಳಲು ಬಯಸುತ್ತೇನೆ, ಮತ್ತು ಉಭಯ ದೇಶಗಳಿಗೆ ಭವಿಷ್ಯವನ್ನು ಸೃಷ್ಟಿಸುವತ್ತ ಕೆಲಸ ಮಾಡುತ್ತೇವೆ ಎಂದು ಸೌದಿ ಪ್ರಿನ್ಸ್ ಹೇಳಿದ್ದಾರೆ.

ಇದನ್ನೂ ಓದಿ: Special parliament Session : ವಿಶೇಷ ಅಧಿವೇಶನದಲ್ಲಿ ಈ ಎರಡು ಮಸೂದೆ ಮಂಡನೆ ಸಾಧ್ಯತೆ

‘ಭಾರತಕ್ಕೆ ಬಂದಿರುವುದಕ್ಕೆ ನನಗೆ ತುಂಬಾ ಖುಷಿಯಾಗಿದೆ. ಜಿ20 ರಾಷ್ಟ್ರಗಳಿಗೆ ಮತ್ತು ಜಗತ್ತಿಗೆ ಅನುಕೂಲವಾಗುವಂತಹ ಸಾಕಷ್ಟು ಘೋಷಣೆಗಳನ್ನು ಮಾಡಲಾಗಿದೆ. ಎರಡೂ ದೇಶಗಳಿಗೆ ಉತ್ತಮ ಭವಿಷ್ಯವನ್ನು ಸೃಷ್ಟಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದಿದ್ದಾರೆ.

ದ್ವಿಪಕ್ಷೀಯ ವ್ಯಾಪಾರವು 2022-23 ರ ಆರ್ಥಿಕ ವರ್ಷದಲ್ಲಿ 52.75 ಶತಕೋಟಿ ಡಾಲರ್‌ಗೆ ತಲುಪಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದೆ. ಜೊತೆಗೆ ಭಾರತ ಮತ್ತು ಸೌದಿ ಅರೇಬಿಯಾ ಪರಸ್ಪರ ವ್ಯಾಪಾರ ಪಾಲುದಾರರಾಗಿ ಪ್ರಮುಖ ಸ್ಥಾನಗಳನ್ನು ಹೊಂದಿವೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles