ಬೆಂಗಳೂರು: ಇಸ್ರೋದ ವಿಜ್ಞಾನಿಗಳ ಶ್ರಮಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಇಂದು ಚಂದ್ರಯಾನ-3ರ ಲ್ಯಾಂಡಿಂಗ್ ಯಶಸ್ವಿಯಾಗಿದೆ. ಇದರ ಜೊತೆಗೆ ಚಂದ್ರನ ದಕ್ಷಿಣ ಧ್ರುವಕ್ಕೆ ಕಾಲಿಟ್ಟ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
ಏಕೆಂದರೆ ವಿಶ್ವದ ಯಾವುದೇ ದೇಶವು ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವುದು ಇಲ್ಲಿಯವರೆಗೆ ಸಾಧ್ಯವಾಗಿರಲಿಲ್ಲ.
ಚಂದ್ರನ ದಕ್ಷಿಣ ಧ್ರುವವು ಚಂದ್ರನ ಇತರ ಭಾಗಕ್ಕಿಂತ ವಿಭಿನ್ನ ಮತ್ತು ನಿಗೂಢವಾಗಿದೆ. ದಕ್ಷಿಣ ಧ್ರುವವು ಕುಳಿಗಳು ಮತ್ತು ಆಳವಾದ ಕಂದಕಗಳಿಂದ ತುಂಬಿದೆ.
ರಷ್ಯಾದಿಂದ ಉಡಾವಣೆಯಾಗಿದ್ದ ಲೂನಾ-25 ಬಾಹ್ಯಾಕಾಶ ನೌಕೆ ಈ ವಾರ ದಕ್ಷಿಣ ಧ್ರುವದಲ್ಲಿ ಇಳಿಯಬೇಕಿತ್ತು. ಆದರೆ, ಸಾಫ್ಟ್ ಲ್ಯಾಂಡಿಂಗ್ ಸಾಧ್ಯವಾಗದೆ ಅದು ಕಳೆದ ಭಾನುವಾರ ನಿಯಂತ್ರಣ ತಪ್ಪಿ ಪತನಗೊಂಡಿತು. ಆದರೆ, ನಮ್ಮ ಭಾರತದ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನನ್ನು ಸ್ಪರ್ಶಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.