ಬೆಂಗಳೂರು: ಶೀಘ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಗಳನ್ನು ಪುನರಾರಂಭಿಸಲಾಗುತ್ತದೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆಯ ವಿಶೇಷ ಆಯುಕ್ತ ಡಾ.ಕೆ.ವಿ.ತ್ರಿಲೋಕ್ ಚಂದ್ರ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ನೀಡಲು ಮುಂದಾಗಿರುವ ಬಿಬಿಎಂಪಿ ಮುಂದಾಗಿದ್ದು, ಇದಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದೆ. ಇದರಂತೆ ಉಪಹಾರ ಮೆನುವನ್ನು ಸಿದ್ಧಪಡಿಸಿದೆ ಎಂದರು. ಪ್ರತಿದಿನ ಮೆನು ಬದಲಾಗುತ್ತಲೇ ಇರುತ್ತದೆ. ಉಪಾಹಾರದ ಸಮಯದಲ್ಲಿ ಉಪ್ಪಿಟ್ಟು, ಕೇಸರಿ ಬಾತ್, ಬಿಸಿಬೇಳೆ ಬಾತ್, ಪೊಂಗಲ್ ಇಡ್ಲಿ ಮತ್ತು ಇತರ ಪದಾರ್ಥಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಿಸಲು ನಿರ್ಧರಿಸಲಾಗಿದ್ದು, ಉಪಹಾರದ ಪ್ರಮಾಣ ಹೆಚ್ಚಳ ಮಾಡಲಾಗ್ತಿದೆ, ಜೊತೆಗೆ ಇಂದಿರಾ ಕ್ಯಾಂಟೀನ್’ಗಳಿಗೆ ಮರುಜೀವ ನೀಡಲು ಬಿಬಿಎಂಪಿ ಭರದ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಇಂದಿರಾ ಕ್ಯಾಂಟೀನ್ ಮೆನೂನಲ್ಲೂ ಬದಲಾವಣೆ ಆಗಲಿದ್ದು, ಜುಲೈ ಅಂತ್ಯದೊಳಗೆ ಬಿಬಿಎಂಪಿ ಕ್ಯಾಂಟೀನ್ಗಳನ್ನು ರೀ ಓಪನ್ ಮಾಡಲಿದೆ. ಇಂದಿರಾ ಕ್ಯಾಂಟೀನ್ ರೀ ಓಪನ್ ಮಾಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸರ್ಕಾರದ ನಿರ್ಧಾರವನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ.