ಬೆಂಗಳೂರು: ವಿಧಾನ ಸಭಾ ಚುನಾವಣೆ 2023ರ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಚ್ಚಲಾಗುತ್ತದೆ. ಆದರೆ, ಸಿದ್ದರಾಮಹುಂಡಿಯಲ್ಲಿ ಮತಗಟ್ಟೆ ಸಂಖ್ಯೆ 86ರಲ್ಲಿ ತಮ್ಮ ಮತಹಕ್ಕು ಚಲಾಯಿಸಿರುವ ಸಿದ್ದರಾಮಯ್ಯ ಅವರ ಬಲಗೈನ ತೋರು ಬೆರಳಿಗೆ ಶಾಯಿ ಹಚ್ಚಲಾಗಿದೆ. ಈ ಕುರಿತಾಗಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಸಿದ್ದರಾಮಹುಂಡಿಯಲ್ಲಿ ಮತಗಟ್ಟೆ ಸಂಖ್ಯೆ 86ರಲ್ಲಿ ಪುತ್ರ ಯತೀಂದ್ರ, ಸೊಸೆ ಸ್ಮಿತಾ ಜತೆಗೆ ತೆರಳಿ ಮತದಾನ ಮಾಡಿದ್ದಾರೆ. ಬಳಿಕ ಸಿದ್ದರಾಮನಹುಂಡಿಯಲ್ಲಿರುವ ಮನೆಯಲ್ಲಿ ಕೆಲಕಾಲ ವಿಶ್ರಾಂತಿ ಪಡೆದು, ಸಿದ್ದರಾಮೇಶ್ವರ ದೇವರ ದರ್ಶನ ಪಡೆದಿದ್ದಾರೆ.ಸಿದ್ದರಾಮಯ್ಯ ಮತದಾನ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ನಾವು ನಿಮಗೆ ಪದೇ ಪದೇ ಹೇಳುತ್ತಿದ್ದೇವೆ, ನಾವು ಕರ್ನಾಟಕ ಜನರ ಭಾವನೆಯನ್ನು ಗಮನಿಸಿದಾಗ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ನಾವು 130ರಿಂದ 150 ಕ್ಷೇತ್ರಗಳಲ್ಲಿ ಜಯ ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾನು ಕ್ಷೇತ್ರದಲ್ಲಿ 60% ಕ್ಕಿಂತ ಹೆಚ್ಚು ಮತಗಳನ್ನು ಪಡೆಯುತ್ತೇನೆ. ಕಾಂಗ್ರೆಸ್ ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ. ನಾನು ಮುಂದೆ ರಾಜಕೀಯ ನಿವೃತ್ತಿಯಾಗುವುದಿಲ್ಲ ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದರು.