ನವದೆಹಲಿ: ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ, ತನ್ನ ಯೋಜನೆಯ ಉದ್ದೇಶಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿದೆ. ಭಾನುವಾರ ನಡೆದ ಚಂದ್ರಯಾನ-3 ಲ್ಯಾಂಡರ್ ಹಾಪ್ ಟೆಸ್ಟ್ ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂಡರ್ ತನ್ನ ಇಂಜಿನ್‌ಗಳನ್ನು ಹಾರಿಸಿತು, ನಿರೀಕ್ಷೆಯಂತೆ ಸುಮಾರು 40 ಸೆಂ.ಮೀ ಎತ್ತರಕ್ಕೆ ಹಾರಿ, 30 – 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಇಸ್ರೋ ಮಾಹಿತಿ ನೀಡಿದೆ.
ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನ : ಕೈ ನಾಯಕರ ಸಭೆ ಕರೆದ ಸೋನಿಯಾ ಗಾಂಧಿ
ಭವಿಷ್ಯದಲ್ಲಿ ಯೋಜನೆಯ ಉದ್ದೇಶ ಮುಗಿದ ಬಳಿಕ ಲ್ಯಾಂಡರ್‌ಗಳನ್ನು ವಾಪಸ್ ಭೂಮಿಗೆ ತರುವ ಹಾಗೂ ಮಾನವ ಸಹಿತ ಚಂದ್ರಯಾನ ಯೋಜನೆಗಳನ್ನು ಉತ್ತೇಜಿಸುವುದು ಈ ಪ್ರಯೋಗದ ಪ್ರಮುಖ ಉದ್ದೇಶವಾಗಿದೆ.
ಚಂದ್ರನ ಮೇಲ್ಮೈ ಮೇಲೆ ವಿಕ್ರಮ್ ಲ್ಯಾಂಡರ್ ಮತ್ತೊಮ್ಮೆ ಸೇಫ್ ಲ್ಯಾಂಡ್ ಆಗಿದೆ. ಇಸ್ರೋ ವಿಜ್ಞಾನಿಗಳ ಕಮ್ಯಾಂಡ್‌ನಿಂದಾಗಿ ಲ್ಯಾಂಡರ್ ಎಂಜಿನ್ ಅನ್ನು ಫೈರ್ ಮಾಡಲಾಗಿತ್ತು. ಇದರಿಂದ ವಿಕ್ರಮ್ ಲ್ಯಾಂಡರ್ ಶಿವಶಕ್ತಿ ಪಾಯಿಂಟ್‌ನಿಂದ 40 ಸೆಂಟಿ ಮೀಟರ್‌ನಷ್ಟು ಎತ್ತರಕ್ಕೆ ಚಿಮ್ಮಿತ್ತು. ಇದಾದ ಬಳಿಕ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ 30-40 ಸೆಂಟಿಮೀಟರ್ ದೂರದಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ.
ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್ ಆದ ಬಗ್ಗೆ ಇಸ್ರೋ ಮಾಹಿತಿಯನ್ನ ಹಂಚಿಕೊಂಡಿದೆ. ಚಂದ್ರನ ಮೇಲ್ಮೈ ಮೇಲೆ ಮತ್ತೆ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಮಾಡಲಾಗಿದೆ. ವಿಕ್ರಮ್ ಲ್ಯಾಂಡರ್‌ನ ಎಲ್ಲಾ ಉಪಕರಣಗಳು ಆರೋಗ್ಯಯುತವಾಗಿವೆ. ಲ್ಯಾಂಡರ್‌ನ ರಾಂಪ್, ಚಸ್ಟೇ, ಇಲ್ಸಾ ಹಿಂದಕ್ಕೆ ಬಂದಿವೆ. ವಿಜ್ಞಾನಿಗಳ ಪ್ರಯೋಗದ ಬಳಿಕ ಮತ್ತೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ನಿಯೋಜನೆಯಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಚಂದ್ರಯಾನ-3ರ ಕೌಂಟ್ ಡೌನ್ ಹಿಂದಿನ ಧ್ವನಿ, ವಿಜ್ಞಾನಿ ಎನ್.ವಲರ್ಮತಿ ನಿಧನ
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.