ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ಮೇರೆಗೆ ಮಂಡ್ಯದ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಲಾಗುತ್ತಿದೆ ಎಂದು ಸುದ್ದಿ ಹರಿದಾಡುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್.ಟಿ ನಗರ ನಿವಾಸದಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ಮೇಲೆ ತಮಿಳುನಾಡಿನ ಪ್ರಭಾವ ಇದ್ದಂಗಿದೆ; ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯೇ ಆಗಿಲ್ಲ. ನೀರು ನಿಯಂತ್ರಣ ಸಮಿತಿಯಲ್ಲೂ ತೀರ್ಮಾನ ಮಾಡಿಲ್ಲ. ಅದಕ್ಕಿಂತ ಮೊದಲೇ ಇವರು ನೀರು ಬಿಡ್ತಾರೆ ಅಂದರೆ ಹೇಗೆ? ಕಾವೇರಿ ಜಲಾನಯನ ಜನರಿಗೆ ಮೋಸ ಮಾಡಿದಂತೆ ಆಗುತ್ತೆ’ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ; ‘ಬೆಳ್ಳಂ ಬೆಳಗ್ಗೆಯೇ ವರದಿ ಓದಿ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು’
‘ಮುಖ್ಯಮಂತ್ರಿಗಳು ಆರಂಭದಲ್ಲಿ ನೀರು ಬಿಡಲ್ಲಎಂದು ಹೇಳಿದ ಮೇಲೂ ನೀರು ಬಿಡ್ತಾರೆ. ನಮ್ಮಲ್ಲೇ ನೀರಿಲ್ಲ ಎಂದು ಸರ್ವಪಕ್ಷ ಸಭೆಯಲ್ಲಿ ಹೇಳಿದ್ರು. ಇದು ಊಸರವಳ್ಳಿ ಸರ್ಕಾರ, ಆಗಾಗಾ ತನ್ನ ನಿರ್ಧಾರ ಬದಲಾವಣೆ ಮಾಡಿಕೊಳ್ತಿದೆ. ಯಾವ ಸರ್ಕಾರವೂ ಕಾವೇರಿ ವಿಚಾರದಲ್ಲಿ ಈ ರೀತಿಯಾಗಿ ನಡೆದುಕೊಂಡಿಲ್ಲ. ಈ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಿಸುವ ಪ್ರಶ್ನೆಯೇ ಇಲ್ಲ. ಏಕೆಂದರೆ, ಕೇಸ್ ಸುಪ್ರೀಂ ಕೋರ್ಟ್ ನಲ್ಲಿ ಇದೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಈ ರೀತಿಯ ಹೇಳಿಕೆ ಕೊಡ್ತಾರೆ. ಅವರಿಗೆ ನಿಜವಾದ ತಾಖತ್ ಧಮ್ ಇದ್ರೆ ನೀರು ಬಿಡ್ತಿರಲಿಲ್ಲ. ತಮ್ಮ ಇಚ್ಛಾಶಕ್ತಿ ಪ್ರದರ್ಶನ ಮಾಡಬೇಕಿತ್ತು’ ಎಂದು ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.