Tuesday, March 28, 2023
spot_img
- Advertisement -spot_img

ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತರಾಗಲಿದ್ದಾರೆ : ಸಚಿವ ಆರ್ ಅಶೋಕ್

ಕೋಲಾರ: ಜನರ ಸಮಸ್ಯೆಗಳಿಗೆ ಸ್ಪಂದಿಸಲು ಪಕ್ಷದ ಕಚೇರಿಗಳು ಅಗತ್ಯವಿತ್ತು. ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ನೂತನ ಕಚೇರಿ ನಿರ್ಮಾಣದಿಂದ ಕಾರ್ಯಕರ್ತರಲ್ಲಿ ಹುರುಪು ಕಂಡು ಬಂದಿದೆ. ಸ್ವಂತ ಕಟ್ಟಡದಿಂದಾಗಿ ಬಿಜೆಪಿ ಕಚೇರಿ ಶಕ್ತಿ ಕೇಂದ್ರವಾಗಿ ಪರಿವರ್ತನೆಯಾಗಲಿದೆ ಎಂದು ರಾಜ್ಯ ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.

ಭಾರತೀಯ ಜನತಾ ಪಕ್ಷದ ಕಚೇರಿ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಸೋಲು ಕಟ್ಟಿಟ್ಟಬುತ್ತಿಯಾಗಿದ್ದು, ರಾಜಕೀಯದಿಂದ ನಿವೃತ್ತರಾಗಲಿದ್ದಾರೆ. ಕಾಂಗ್ರೆಸ್‌ ಪಕ್ಷವು ಚುನಾವಣೆಯಲ್ಲಿ ಹೀನಾಯವಾಗಿ ಸೋತು ಕರ್ನಾಟಕವು ಕಾಂಗ್ರೆಸ್‌ ಮುಕ್ತವಾಗಲಿದೆ ಎಂದರು.

ಕಾಂಗ್ರೆಸ್‌ ಪಕ್ಷದಲ್ಲಿ ಪಕ್ಷಕ್ಕಿಂತ ಅಧಿಕಾರಕ್ಕೆ ಹೆಚ್ಚು ಮಾನ್ಯತೆ ನೀಡುತ್ತಾರೆ. ಆದರೆ ಬಿಜೆಪಿ ಪಕ್ಷದಲ್ಲಿ ಮೊದಲು ಪಕ್ಷ ನಂತರ ಅಧಿಕಾರ ಎಂಬ ತತ್ವ ಸಿದ್ದಾಂತಗಳು ನಮ್ಮದಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಪಕ್ಷಕ್ಕೆ ಯಾವುದೇ ವಿರೋಧವಿಲ್ಲ, ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳು ಜಿಲ್ಲೆಯಿಂದ ಆಯ್ಕೆಯಾಗಬೇಕು. ಜನರ ಮನಸ್ಸಿನಲ್ಲಿ ಪ್ರಧಾನಿ ನರೇಂದ್ರ ಅಳವಾಗಿ ಬೇರೂರಿದ್ದಾರೆ ಎಂದರು.

ನಮಗೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷದ ಡಬಲ್‌ ಇಂಜಿನ್‌ ಇದ್ದು ಸಾಕಷ್ಟುಅಭಿವೃದ್ಧಿಗೊಳ್ಳುತ್ತಿದೆ, ಮುಂಬರುವ ಚುನಾವಣೆಯಲ್ಲಿ ಬಹುಮತದಿಂದ ಜಯಭೇರಿ ಬಾರಿಸಿ ಅಡಳಿತದ ಚುಕ್ಕಣಿ ಹಿಡಿಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅಭಿಪ್ರಾಯಪಟ್ಟರು.

Related Articles

- Advertisement -

Latest Articles