ಧಾರವಾಡ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಜಗದೀಶ್ ಶೆಟ್ಟರ್ ಮನವೊಲಿಸುವ ಪ್ರಯತ್ನ ವಿಫಲವಾಗಿದ್ದು, ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೆ, ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ನನ್ನದು ಯಾವುದೇ ಭ್ರಷ್ಟಾಚಾರ, ಸೆಕ್ಸ್ ಸಿಡಿಯೂ ಇಲ್ಲ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ ಎಂದು ಭಾವುಕರಾಗಿಯೇ ಅಸಮಾಧಾನ ವ್ಯಕ್ತಪಡಿಸಿದರು.
ನನ್ನ ವಿರುದ್ದ ಕುತಂತ್ರ, ಷಡ್ಯಂತ್ರ ನಡೆದಿದೆ. ನನ್ನ ಈ ರೀತಿ ಟ್ರಿಟ್ ಮಾಡಿರುವುದು ನನಗೆ ಶಾಕಿಂಗ್ ಎಂದು ತಿಳಿಸಿದರು. ನನಗೆ ರಾಜಕೀಯ ನಿವೃತ್ತಿ ಆಗಬೇಕು ಅಂದ್ರೆ ಗೌರವಯುತವಾಗಿ ಹೋಗುತ್ತಿದ್ದೆ. ನಮ್ಮಂತ ಲೀಡರ್ ರನ್ನು ಯುಸ್ ಆ್ಯಂಡ್ ಥ್ರೋ ಎಂಬಂತೆ ಮಾಡಿದರು. ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಹಾಗೇ ಕುಟುಂಬದ ಸದಸ್ಯರಿಗೆ ಟಿಕೆಟ್ ಕೊಡುವುದಕ್ಕೆ ಓಕೆ ಅಂದ್ರು. ಇದಕ್ಕೆ ನಾನು ಜಗದೀಶ್ ಶೆಟ್ಟರ್ಗೆ ಯಾಕೆ ಇಲ್ಲ ಎಂದು ನಾನು ಧರ್ಮೆಂದ್ರ ಪ್ರಧಾನ ಅವರಿಗೆ ಕೇಳಿದೆ. ಅದಕ್ಜೆ ಉತ್ತರ ಇಲ್ಲ ಎಂದು ಬೇಸರಿಸಿದರು.