ಹುಬ್ಬಳ್ಳಿ: ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂಬುದು ಶುದ್ಧ ಸುಳ್ಳು , ನನ್ನ ಹೆಸರಿನಲ್ಲಿ ವೈರಲ್ ಆಗುತ್ತಿರುವ ರಾಜೀನಾಮೆ ಪತ್ರ ನಕಲಿಯಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.
ಕ್ಷೇತ್ರ ಬಿಟ್ಟುಕೊಡುವಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರಿನಲ್ಲಿ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,ಸ್ವತ: ಜಗದೀಶ್ ಶೆಟ್ಟರ್ ಸ್ಪಷ್ಟನೆ ಕೊಟ್ಟಿದ್ದಾರೆ.


ನನ್ನ ಲೆಟರ್ ಹೆಡ್ನಲ್ಲಿ ಯಾರೋ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ನಾನು ಯಾವುದೇ ಪತ್ರ ಬರೆದಿಲ್ಲ , ಹೈಕಮಾಂಡ್ ಗೆ ಪತ್ರ ಬರೆದಿರುವುದಾದರೆ ಇಂಗ್ಲಿಷ್ನಲ್ಲಿ ಬರೆಯುತ್ತಾರೆ. ಅದು ಕನ್ನಡದಲ್ಲಿ ಇದೆ ಅಂದರೆ ಅರ್ಥ ಮಾಡ್ಕೊಳ್ಳಿ, ಇದೆಲ್ಲ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಹಲವಾರು ಬೆಳವಣಿಗೆಗಳಿಂದ ನನ್ನ ಮನಸ್ಸಿಗೆ ತೀವ್ರ ನೋವಾಗಿದ್ದು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.
ಕಳೆದ ನಾಲ್ಕು ದಶಕಗಳಿಂದ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ, ಒಬ್ಬ ಸಾಮಾನ್ಯ ಕಾರ್ಯಕರ್ತನಿಂದ ಮುಖ್ಯಮಂತ್ರಿಯವರೆಗೆ ನನ್ನ ಪ್ರಾಮಾಣಿಕ ಶ್ರಮದ ಬಗ್ಗೆ ತೃಪ್ತಿ ಇದೆ ಎಂದು ವೈರಲ್ ಪತ್ರದಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲದೇ ಸುದ್ದಿ ಗೋಷ್ಠಿ ನಡೆಸಿ, ನಾನು ಸ್ಪರ್ಧೆ ಮಾಡಬಾರದು ಎಂದಾಗಿದ್ದರೆ ಎರಡು-ಮೂರು ತಿಂಗಳ ಹಿಂದೆ ನನಗೆ ಹೇಳಬೇಕಿತ್ತು ಎಂದು ಬೇಸರಿಸಿದ್ದರು.