ಹುಬ್ಬಳ್ಳಿ: ಬಿಜೆಪಿ ನನಗೆ ಎಲ್ಲಾ ಸ್ಥಾನಮಾನ ನೀಡಿದೆ, ಹಾಗಾಗಿ ಋಣಿಯಾಗಿರುವೆ ಎಂದು ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.
ಬೆಂಬಲಿಗರ ಸಭೆಯಲ್ಲಿ ಮಾತನಾಡಿ, ಶಾಸಕ, ಸಚಿವ, ವಿಪಕ್ಷ ನಾಯಕ, ಸ್ಪೀಕರ್, ಸಿಎಂ ಆಗಿ ಸೇವೆ ಮಾಡಿರುವೆ. ಇದುವರೆಗೆ 6 ಬಾರಿ ಚುನಾವಣೆಗೆ ಸ್ಪರ್ಧಿಸಿ ಬಹುಮತದಿಂದ ಗೆದ್ದಿದ್ದೇನೆ ಎಂದು ಹೇಳಿದರು. ನನಗೆ ಅಧಿಕಾರದ ದಾಹವಿಲ್ಲ, ಜನಸೇವೆ ಮಾಡಲು ಅವಕಾಶ ಕೇಳಿದ್ದೇನೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಬಂದು ಹೋಗಿದ್ದಾರೆ. ಕೇಂದ್ರದ ನಾಯಕರು ನನಗೆ ಟಿಕೆಟ್ ಘೋಷಿಸುವ ಸಾಧ್ಯತೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಟಿಕೆಟ್ ಘೋಷಣೆಯಾಗದ ಹಿನ್ನೆಲೆ ಕ್ಷೇತ್ರದ ಶಾಸಕ ಜಗದೀಶ್ ಶೆಟ್ಟರ್ ಅಸಮಾಧಾನಗೊಂಡಿದ್ದಾರೆ. ನನಗೆ ಟಿಕೆಟ್ ಕೊಡೋ ವಿಶ್ವಾಸ ಇದೆ. ಇವತ್ತು ಎಲ್ಲ ರೀತಿ ಪ್ರಯತ್ನ ನಡೀತಿದೆ. ನನಗೆ ಇವಾಗಲೂ ಟಿಕೆಟ್ ಕೊಡ್ತಾರೆ ಅನ್ನೋ ಹೋಪ್ಸ್ ಇದೆ. ನಮ್ಮ ಕುಟುಂಬ ಜನ ಸಂಘದಿಂದ ಬಿಜೆಪಿವರೆಗೂ ಬಂದಿದೆ. ಇದೆಲ್ಲ ವರಿಷ್ಠರಿಗೆ ಗೊತ್ತಿದೆ ಎಂದು ಭಾವುಕರಾಗಿದ್ದಾರೆ.