ಹುಬ್ಬಳ್ಳಿ: ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ, ನನಗೆ ಟಿಕೆಟ್ ಸಿಗೋ ವಿಶ್ವಾಸವಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದು ಯಡಿಯೂರಪ್ಪರನ್ನ ಭೇಟಿಯಾಗಬೇಕಿತ್ತು. ಆದ್ರೆ ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರು ಏರ್ಪೋರ್ಟ್ ನಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನ ಎಂದರು. ಹೈಕಮಾಂಡ್ ಸೂಚನೆ ಮೇರೆಗೆ ದೆಹಲಿಗೆ ಜಗದೀಶ್ ಶೆಟ್ಟರ್ ತೆರಳುತ್ತಿದ್ದಾರೆ.
ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕು ಅಂತೇನಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರಬಹುದು ಎಂದು ಟಿಕೆಟ್ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.
ರಾಜಕಾರಣದಲ್ಲಿ ಗೌರವಯುತವಾಗಿ ನಿವೃತ್ತಿಯಾಗಬೇಕು. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು. ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರು ಇದ್ದಾರೆ. ಅವರನ್ನು ಸೀನಿಯರ್ಸ್ ಎನ್ನುವುದಿಲ್ವಾ ಎಂದು ಪ್ರಶ್ನಿಸಿದರು. ಬಿಜೆಪಿ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನೀಡಿಲ್ಲ. ಇದರಿಂದ ಅಸಮಾಧಾನಗೊಂಡು ಹೈಕಮಾಂಡ್ ದೆಹಲಿಗೆ ಬರುವಂತೆ ದಿಢೀರ್ ಬುಲಾವ್ ನೀಡಿದೆ.