ಹುಬ್ಬಳ್ಳಿ: ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದ್ದು, ಇಂದು ರಾತ್ರಿಯೇ ಬಿಜೆಪಿ ಪಟ್ಟಿ ಬಿಡುಗಡೆಯಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಮಾಧ್ಯಮ ಕೇಂದ್ರ ಉದ್ಘಾಟನೆ ಬಳಿಕ ಮಾತನಾಡಿ, ರಾತ್ರಿಯೇ ಮೊದಲ ಪಟ್ಟಿ ಬಿಡುಗಡೆ ಆಗುವ ಮಾಹಿತಿ ಇದೆ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಎಡಕ್ಕೆ, ಮತ್ತೊಬ್ಬರು ಬಲಕ್ಕೆ ಎಳೆಯುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಎಂಜಿನ್ ಪಕ್ಷವಾಗಿದೆ ಅಂತಾ ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಅನೇಕ ಯೋಜನೆಗಳಿಗೆ ಮೋದಿ ಚಾಲನೆ ನೀಡಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಇಂದು ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಎಲ್ಲದರ ಬಗ್ಗೆ ಕೂಲಂಕುಷವಾಗಿ ಚರ್ಚಿಸಲಾಗುವುದು ಎಂದರು.
ಇಲ್ಲಿ ವಿಳಂಬ ಅನ್ನುವ ಪ್ರಶ್ನೆ ಇಲ್ಲ. ಈ ಹಿಂದಿನ ಚುನಾವಣೆಯಲ್ಲಿಯೂ ಚುನಾವಣಾ ದಿನಾಂಕ ಘೋಷಣೆ ಬಳಿಕವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ನಮ್ಮದು ರಾಷ್ಟ್ರೀಯ ಪಕ್ಷ ಎಲ್ಲವೂ ಫೈನಲ್ ಆಗಿ ಇಂದು ರಾತ್ರಿ ಬಿಡುಗಡೆಯಾಗಬಹುದು ಎಂದು ಹೇಳಿದರು.