Saturday, June 10, 2023
spot_img
- Advertisement -spot_img

ಕಾಂಗ್ರೆಸ್‌ನಿಂದ ಜಗದೀಶ್ ಶೆಟ್ಟರ್‌ಗೆ ಸ್ಪೆಶಲ್‌ ಫ್ಲೈಟ್ ..?

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು ಬೆಂಗಳೂರಿಗೆ ತೆರಳಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲಿದ್ದಾರೆ ಅಂತಾ ಹೇಳಲಾಗ್ತಿದೆ, ಅಂದಹಾಗೆ ಜಗದೀಶ್ ಶೆಟ್ಟರ್ ಸ್ವಾಗತಕ್ಕೆ ಈಗಾಗಲೇ ಕಾಂಗ್ರೆಸ್ ವೇದಿಕೆ ಸಿದ್ಧಗೊಂಡಿದ್ದು, ಶೆಟ್ಟರ್‌ರನ್ನು ಕರೆತರಲು ಹುಬ್ಬಳ್ಳಿಯಿಂದ 2 ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಡಿಕೆಶಿ ಆಪ್ತ ಯು.ಬಿ.ಶೆಟ್ಟಿ ಹೆಸರಿನಲ್ಲಿ ಹೆಲಿಕಾಪ್ಟರ್ ಬುಕ್ ಆಗಿದ್ದು, ಮಧ್ಯಾಹ್ನದ ನಂತರ ಶೆಟ್ಟರ್ ಬೆಂಗಳೂರಿಗೆ ತೆರಳಲಿದ್ದಾರೆ.

ಶಿರಸಿಯಿಂದ ವಾಪಸ್ ಆದ ಬಳಿಕ ಬೆಂಗಳೂರು ಕಡೆ ಮುಖಮಾಡಲಿದ್ದು, ಈ ವೇಳೆ ಶೆಟ್ಟರ್ ಜೊತೆ ಮಾಜಿ ಶಾಸಕರು, ಕೆಲ ನಿಗಮ ಮಂಡಳಿ ಅಧ್ಯಕ್ಷರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಅಂದಹಾಗೆ ಶೆಟ್ಟರ್ ರರವರನ್ನು ಕರೆತರಲು ಹೆಲಿಕಾಪ್ಟರ್ ಬುಕ್ ಮಾಡಲಾಗಿದ್ದು, ಮೊನ್ನೆ ಲಕ್ಷ್ಮಣ್ ಸವದಿಯವರನ್ನು ಕರೆತರಲು ಹೆಲಿಕಾಪ್ಟರ್ ಬುಕ್ ಮಾಡಲಾಗಿತ್ತು.

ರಾಜೀನಾಮೆ ಕುರಿತು ಜಗದೀಶ್ ಶೆಟ್ಟರ್ ಮಾತನಾಡಿ, ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳು ನನ್ನ ಕೆಟ್ಟ ದಿನಗಳಾಗಿವೆ, ಶಿಸ್ತು ಬದ್ಧವಾಗಿ ರಾಜಕೀಯ ಜೀವನ ನಡೆಸಿದ್ದೇನೆ, ಟಿಕೆಟ್ ಯಾಕೆ ಕೊಟ್ಟಿಲ್ಲಾಂತ ನಾಯಕರನ್ನು ಕೇಳಿದ್ದೆ, ಅದಕ್ಕೆ ಉತ್ತರ ಸಿಕ್ಕಿಲ್ಲ ಎಂದು ಬೇಸರಿಸಿದ್ದಾರೆ.

ಬಿಜೆಪಿ ಟಿಕೆಟ್ ಕೊಡದ್ದಕ್ಕೆ ಬೇಸರಿಸಿಕೊಂಡಿದ್ದ ಜಗದೀಶ್ ಶೆಟ್ಟರ್‌ಗೆ ಪತ್ನಿ ಶಿಲ್ಪಾ ಶೆಟ್ಟರ್ ಕಾಂಗ್ರೆಸ್ ಸೇರಿಕೊಳ್ಳಿ , ಪಕ್ಷೇತರರಾಗಿ ನಿಲ್ಲೋದು ಬೇಡ ಎಂದು ಸಲಹೆ ನೀಡಿದ್ದಾರೆ. ಜಗದೀಶ್ ಶೆಟ್ಟರ್ ಮನವೊಲಿಸಲು ಸ್ಪೀಕರ್ ಕಾಗೇರಿ ಯತ್ನಿಸುತ್ತಿದ್ದು, ಶೆಟ್ಟರ್ ರವರ ಮುಂದಿನ ನಡೆ ಏನು ಅನ್ನೋದು ಸದ್ಯದ ಕುತೂಹಲ.

Related Articles

- Advertisement -spot_img

Latest Articles