ಧಾರವಾಡ : ರೆಡ್ಡಿ ಅವರು ಹೊಸ ಪಕ್ಷದ ವಿಚಾರಕ್ಕೆ ಸಂಬಂಧಿಸಿದಂತೆ ನಾಯಕರ ಜೊತೆ ಮಾತನಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.
ಧಾರವಾಡದಲ್ಲಿ ಮಾತನಾಡಿ,ಈ ಬಗ್ಗೆ ನನ್ನ ಜೊತೆ ರೆಡ್ಡಿ ಮತ್ತು ಯಾರೂ ಮಾತನಾಡಿಲ್ಲ, ಇತ್ತೀಚೆಗೆ ರೆಡ್ಡಿ ಅವರು ನನ್ನ ಜೊತೆ ವೈಯಕ್ತಿಕ ಸಂಪರ್ಕದಲ್ಲಿಲ್ಲ ಎಂದರು. ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ , ಬಿ.ಎಸ್ ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಅವರನ್ನು ಪ್ರಶಂಸಿಸಿದ್ದರು.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಇಬ್ಬರು ನನ್ನ ಕಷ್ಟದ ದಿನಗಳಲ್ಲಿ ಬಂದು ನನಗೆ ಧೈರ್ಯ ತುಂಬಿದ್ದರು. ಅದಕ್ಕಾಗಿ ನಾನು ಅವರನ್ನು ನೆನಪು ಮಾಡಿಕೊಳ್ಳುತ್ತೇನೆ. ಆದರೆ ನನ್ನವರೇ ಅಂತ ನಾನು ಎಲ್ಲರನ್ನು ಮೆರೆಸಿ ಮೋಸ ಹೋದೆ. ಇದನ್ನ ನನ್ನ ಸ್ನೇಹಿತರು ಈಗಲೂ ಹೇಳ್ತಾರೆ. ನನ್ನ ಜೊತೆ ಕಷ್ಟದಲ್ಲಿ ಯಾರು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಬಸವಣ್ಣ ಹಾದಿಯಲ್ಲಿ ನಡೆಯಲು ಸಂಕಲ್ಪ ಮಾಡಿದ್ದೇನೆ.
ಜಾತಿ, ಮತ, ಬೇಧ, ಭಾವ ಇಲ್ಲದೇ ಮೇಲು ಕೇಳು ಇಲ್ಲದ ಹಾಗೆ ಕೆಲಸ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇನೆ. ಬಸವಣ್ಣನವರ ಸ್ಮರಣೆ ಮಾಡುತ್ತಾ ಸಾರ್ವಜನಿಕ ಬದುಕಿಗೆ ಬರುತ್ತಿದ್ದೇನೆ. ಬಿಜೆಪಿ ಜೊತೆ ನಾನು ಬಾಂಧವ್ಯವನ್ನು ಕಡಿದುಕೊಳ್ಳುತ್ತಿದ್ದೇನೆ. ಈ ಕಾರಣಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ನಿರ್ಮಾಣ ಮಾಡ್ತಿದ್ದೇನೆ ಎಂದು ತಿಳಿಸಿದ್ದರು.