ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸುವಂತೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸಿಎಂಗೆ ಪತ್ರ ಬರೆದಿದ್ದಾರೆ. ಗಣರಾಜ್ಯೋತ್ಸವವನ್ನು ಈ ವರ್ಷ ಇದೇ ಮೈದಾನದಲ್ಲಿ ಅದ್ಧೂರಿಯಾಗಿ ಆಚರಿಸಬೇಕು. ಕೂಡಲೇ ಸರ್ಕಾರ ಇದಕ್ಕೆ ನಿರ್ದೇಶನ ನೀಡಿ ಸರ್ಕಾರದ ವತಿಯಿಂದಲೇ ಕಾರ್ಯಕ್ರಮ ನಡೆಸಬೇಕು ಎಂದು ಕೋರಿದ್ದಾರೆ.
ದೇಶಪ್ರೇಮದ ಹೆಸರಿನಲ್ಲಿ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸುವ ಕಾರ್ಯವಾದರೆ ಮತಬ್ಯಾಂಕ್ ಗಟ್ಟಿಗೊಳಿಸಿಕೊಳ್ಳಬಹುದು ಎನ್ನುವುದು ಜಮೀರ್ ಲೆಕ್ಕಾಚಾರ ಎಂದು ಹೇಳಲಾಗುತ್ತಿದೆ.
ಈದ್ಗಾ ಮೈದಾನ ವಿವಾದ ಕೋರ್ಟ್‌ನಲ್ಲಿದೆ. ಮಾಲೀಕತ್ವದ ವಿಚಾರಣೆ ನಡೆಯುತ್ತಿದ್ದು, ಸ್ಥಳ ಸರ್ಕಾರದ್ದು ಎಂದು ಕೋರ್ಟ್ ಹೇಳಿದೆ. ಇದರ ಆಧಾರದಲ್ಲಿ ಕಳೆದ ವರ್ಷ ಹಿಂದೂಪರ ಸಂಘಟನೆಗಳು ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮುಂದಾಗಿದ್ದವು.
ಕಳೆದ ಬಾರಿ ಧ್ವಜಾರೋಹಣ ಮಾಡಿದ್ದ ಬೆಂಗಳೂರು ಉತ್ತರ ಎ.ಸಿ.ಶಿವಣ್ಣ ಅವರೇ ಈ ಬಾರಿಯೂ ಧ್ವಜಾರೋಹಣ ಮಾಡಲಿದ್ದಾರೆ ಎಂದು ಸಂಸದ ಪಿ.ಸಿ.ಮೋಹನ್ ಮಾಹಿತಿ ನೀಡಿದ ನಂತರ ಜಮೀರ್ ಕೂಡಾ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.