Saturday, June 10, 2023
spot_img
- Advertisement -spot_img

ಪಕ್ಷದ ಚಿಹ್ನೆ, ಪ್ರಣಾಳಿಕೆ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ

ಬೆಂಗಳೂರು: ಮಾಜಿ ಸಚಿವ, ಕರ್ನಾಟಕ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖ್ಯಸ್ಥ ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಫುಟ್ ಬಾಲ್, ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

ಈ ವೇಳೆ ಮಾತನಾಡಿ,  90 ದಿನಗಳಲ್ಲಿ 12 ಮಂದಿ ಅಭ್ಯರ್ಥಿ ಘೋಷಣೆ ಮಾಡಿದ್ದೇನೆ. ಇನ್ನು 19 ಅಭ್ಯರ್ಥಿಯನ್ನ ಇನ್ನೊಂದು ವಾರದಲ್ಲಿ ಘೋಷಣೆ ಮಾಡ್ತೀನಿ, 30 ಕ್ಷೇತ್ರ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.   

ಕಲ್ಯಾಣ ರಾಜ್ಯ ಪ್ರಗತಿ ಪಕ್ಷವೂ ಯಾರ ಜೊತೆಗೂ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ. ಬಿಜೆಪಿ ಸೇರಿದಂತೆ ಯಾವ ಪಕ್ಷದ ನಾಯಕರು ನನ್ನ ಸಂಪರ್ಕ ಮಾಡಿಲ್ಲ. ನಾನು ಯಾವ ಪಕ್ಷದ ಜೊತೆಗೂ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಖಚಿತಪಡಿಸಿದರು. ರಾಜಕೀಯದಲ್ಲಿ ನನ್ನವರು ಶತ್ರುಗಳು ಎಲ್ಲರು ಸೇರಿ ನನ್ನನ್ನ ಫುಟ್ ಬಾಲ್ ತರ ಆಡಿದ್ರು. ಈಗ ನಾನು ಎಲ್ಲರನ್ನು ಸೇರಿಸಿ ಫುಟ್ ಬಾಲ್ ಆಡಬಹುದು ಎಂದು  ಈ ಚಿಹ್ನೆ ಆಯ್ಕೆ ಮಾಡಿದ್ದೇನೆ ಎಂದು  ತಿಳಿಸಿದರು. 

ಇನ್ನೂ ಪಕ್ಷದಿಂದ ನೀಡಲಾದ ಪ್ರಣಾಳಿಕೆಯಲ್ಲಿ ಪ್ರತಿ ಮನೆಗೆ 250 ಯೂನಿಟ್ ವಿದ್ಯುತ್ ಉಚಿತ, ಎಸ್‌ಟಿ, ಎಸ್‌ಸಿ ಉಚಿತ ನಿವೇಶನ, 5 ಎಕರೆಗಿಂತ ಕಡಿಮೆ ಇದ್ರೆ ರೈತರಿಗೆ ಬಂಡವಾಳದ 15 ಸಾವಿರ ರೂ ನೆರವು, ರೈತರಿಗೆ ಬಡ್ಡಿ ರಹಿತ ಸಾಲ ನೀಡುವುದು, ಹೆಣ್ಣು ಮಕ್ಕಳ ಹೆಸರಿನಲ್ಲಿ ಮನೆ ಇಲ್ಲದೆ ಇರುವವರಿಗೆ 2 ಬಿಹೆಚ್‌ಕೆ ಮನೆ, ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರಿಗೆ ಸಮಾನ ವೇತನ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ, ಮಹಿಳೆಯರ ಭದ್ರತೆಗೆ ಹೊಸ ಮಹಿಳೆಯರ ತಂಡ ಸ್ಥಾಪನೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ 1000 ವೇತನ ಹೆಚ್ಚಳ, ಆರ್ಥಿಕ ದೌರ್ಬಲ್ಯ ಮಕ್ಕಳಿಗೆ ಉಚಿತ ಶಿಕ್ಷಣ ಹೀಗೆ ಭರವಸೆ ನೀಡಲಾಗಿದೆ.

Related Articles

- Advertisement -spot_img

Latest Articles