Wednesday, May 31, 2023
spot_img
- Advertisement -spot_img

13 ವರ್ಷದ ಬಳಿಕ ವಿಧಾನಸೌಧಕ್ಕೆ ರೆಡ್ಡಿ ಎಂಟ್ರಿ, ಶುಭ ಕೋರಿದ ಡಿಕೆಶಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿಯವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭ ಕೋರಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಆಗಮಿಸಿದ್ದ ವೇಳೆ ವಿಶ್ ಮಾಡಿದ್ದಾರೆ. ವಿಧಾನಸೌಧದ ಒಳಗೆ ಶಾಸಕರ ಫೋಟೋ ತೆಗೆಸಲು ವ್ಯವಸ್ಥೆ ಮಾಡಿದ್ದ ಜಾಗದಲ್ಲಿ ಇಬ್ಬರು ಫೋಟೋಗೆ ಪೋಸ್ ನೀಡಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಗೆದ್ದ ನೂತನ ಶಾಸಕರು ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ. ಇನ್ನೂ ಆರ್ ಅಶೋಕ್, ಮಾಜಿ ಸಿಎಂ ಬೊಮ್ಮಾಯಿಕೂಡಾ ಡಿಸಿಎಂ ಡಿಕೆಶಿವಕುಮಾರ್ ಗೆ ವಿಶ್ ಮಾಡಿ ಫೋಟೋ ತೆಗೆಸಿಕೊಂಡರು.

ನೂತನ ಸಚಿವ ಸಂಪುಟ ರಚನೆಯಾಗಲಿದ್ದು, ಶಾಸಕರಿಗೆ ಪ್ರಮಾಣ ವಚನ ಭೋಧಿಸಲು ಹಿರಿಯ ಶಾಸಕ ಆರ್.ವಿ ದೇಶಪಾಂಡೆಯವರನ್ನು ಹಂಗಾಮಿ ಸ್ಪೀಕರ್ ಆಗಿ ಆಯ್ಕೆಮಾಡಲಾಗಿದೆ.ಈ ಬಾರಿಯ ಚುನಾವಣೆಯಲ್ಲಿ ಗೆದ್ದ ನೂತನ ಶಾಸಕರು ಫೋಟೋ ತೆಗೆಸಿಕೊಂಡಿದ್ದಾರೆ.

ಇಂದು 13 ವರ್ಷಗಳ ಬಳಿಕ 16 ನೇ ವಿಧಾನಸಭೆಯ ಅಧಿವೇಶನಕ್ಕೆ ಸಮಸ್ತ ನಾಡಿನ ಮಹಾಜನತೆಯ ಶುಭ ಹಾರೈಕೆ ಮತ್ತು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನತೆಯ ಆಶೀರ್ವಾದ ಹಾಗೂ ಬೆಂಬಲದಿಂದ ವಿಧಾನಸಭೆಗೆ ಪ್ರವೇಶಿಸಿದ ಕ್ಷಣಗಳು ಎಂದು ಬರೆದು.. ಜನಾರ್ಧನ ರೆಡ್ಡಿ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

Related Articles

- Advertisement -

Latest Articles