ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಗಳ ಆಯೋಗದ ನೂತನ ಅಧಿಸೂಚನೆಗಳನ್ನು ಅನುಸರಿಸದಿರುವ ಆರೋಪದ ಹಿನ್ನೆಲೆಯಲ್ಲಿ ಜಯನಗರದ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ. ಹಳೆಯ ನಿಯಮಗಳನ್ನು ಮತ ಎಣಿಕೆ ಪ್ರಕ್ರಿಯೆಯಲ್ಲಿ ಅನುಸರಿಸಿರುವ ಕುರಿತು ಕೋರ್ಟ್ ಮೆಟ್ಟಿಲೇರಿರುವ ಅವರು, ಆಯೋಗದ ಆದೇಶದ ಆಧಾರದಲ್ಲಿ ಮತ ಎಣಿಕೆ ನಡೆದಿಲ್ಲ. ಅಲ್ಲದೆ ಮರು ಮತ ಮಣಿಕೆಯಲ್ಲಿಯೂ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಕೈ ಪರಾಜಿತ ಅಭ್ಯರ್ಥಿ ಆರೋಪಿಸಿದ್ದಾರೆ.
ಇದನ್ನೂ ಓದಿ : ‘ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ’ ಎಂದು ಬಿಜೆಪಿಗರ ಕಾಲೆಳೆದ ಕಾಂಗ್ರೆಸ್!
ಅಂಚೆ ಮತಗಳ ಎಣಿಕೆಯಲ್ಲೂ ಲೋಪವಾಗಿದ್ದು, 837 ಮತಗಳ ಮರು ಎಣಿಕೆಗೆ ಬೇಡಿಕೆ ಇಟ್ಟಿರುವ ಸೌಮ್ಯ ರೆಡ್ಡಿ ಇದಕ್ಕೆ ಸಂಬಂಧಿಸಿದ ದೃಶ್ಯಾವಳಿಗಳನ್ನು ಪರಿಶೀಲಿಸಬೇಕೆಂದು ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ನೂತನ ಅಧಿಸೂಚನೆ ಪ್ರಕಾರ ಮತ ಎಣಿಕೆಯಾದ್ರೆ ಗೆಲುವು ನಮ್ಮದೆ..
ಕಳೆದ ವಿಧಾನಸಭಾ ಮತ ಎಣಿಕೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಹೈ ಕೋರ್ಟ್‌ಗೆ ಅರ್ಜಿ ಹಾಕಲಾಗಿದೆ. ಆಗ ಮತ ಎಣಿಕೆಯ ಸಂದರ್ಭದಲ್ಲಿ ಚುನಾವಣಾಧಿಕಾರಿ ಹಳೆಯ ನಿಯಮಗಳಂತೆ ಮತ ಎಣಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಮಗೆ ಹಿನ್ನಡೆಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸೌಮ್ಯ ರೆಡ್ಡಿ ಸ್ಫರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿರುವ ಅವರು, 2023ರ ಅಧಿಸೂಚನೆಯಂತೆ ಮತ ಎಣಿಕೆಯಾದರೆ ಗೆಲುವು ನಮ್ಮದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಸಿ ಕೆ ರಾಮಮೂರ್ತಿ ವಿರುದ್ಧ ಸೌಮ್ಯ ರೆಡ್ಡಿ 16 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.