Monday, March 27, 2023
spot_img
- Advertisement -spot_img

ಜೆಡಿಎಸ್ ಅಭ್ಯರ್ಥಿ ಶಿವಾನಂದ್ ಪಾಟೀಲ್ ಸೋಮಜಾಳ ಹೃದಯಾಘಾತದಿಂದ ನಿಧನ

ವಿಜಯಪುರ: ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ್ ಪಾಟೀಲ್ ಸೋಮಜಾಳ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪಂಚರತ್ನ ಕಾರ್ಯಕ್ರಮದಲ್ಲಿ ಹೆಚ್‍ಡಿಕೆಯೊಂದಿಗೆ ಶಿವಾನಂದ್ ಭಾಗಿಯಾಗಿದ್ದರು. ನಂತರ ಸಂಜೆ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು. ರಾತ್ರಿ ಅಸ್ವಸ್ಥಗೊಂಡ ಶಿವಾನಂದ್ ಪಾಟೀಲ್ ಸೋಮಜಾಳ, ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಸೋಮಜಾಳ ಗ್ರಾಮದ ಮೂಲದವರಾಗಿರುವ ಇವರು, ಪತ್ನಿ ವಿಶಾಲಾಕ್ಷಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ.

ವಿಧಾನಸಭೆ ಚುನಾವಣೆಗೆ ಜೆಡಿಎಸ್ ಬಿಡುಗಡೆ ಮಾಡಿದ್ದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಶಿವಾನಂದ ಪಾಟೀಲ್ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು.

ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ್ ಪಾಟೀಲ್ ಸೋಮಜಾಳ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಶಿವಾನಂದ್ ಸೋಮಜಾಳ ಅಕಾಲಿಕ ಮರಣ ನನಗೆ ಆಘಾತ ತಂದಿದೆ.ಜನವರಿ 18 ರಂದು ಪೂರ್ತಿ ದಿನ ಸಿಂದಗಿ ಕ್ಷೇತ್ರದಲ್ಲಿ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ದೇವರ ಹಿಪ್ಪರಗಿ ಕ್ಷೇತ್ರಕ್ಕೆ ಬೀಳ್ಕೊಟ್ಟಿದ್ದರು.

ಸೇನೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತಿ ಪಡೆದಿದ್ದ ಅವರು, ಸಮಾಜ ಸೇವೆಯ ಅದಮ್ಯ ಹಂಬಲ ಹೊಂದಿದ್ದರು. ಪರಿಚಯವಾದ ಅಲ್ಪಕಾಲದಲ್ಲೆ ಆತ್ಮೀಯರಾಗಿದ್ದರು ಎಂದು ತಿಳಿಸಿದ್ದಾರೆ.

Related Articles

- Advertisement -

Latest Articles