ಬೆಂಗಳೂರು: ಮುಂಬರುವ ವಿಧಾನ ಸಭಾ ಚುನವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಗುರಿ ಇದ್ದು, ಇದಕ್ಕಾಗಿ ಪಂಚರತ್ನ ಹೆಸರಿನಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ -ಬಿಜೆಪಿಗಿಂತ ನಮ್ಮ ಪಂಚರತ್ನ ರಥಯಾತ್ರೆ ವಿಶೇಷವಾಗಿ ಇರಲಿದೆ. ಜನರ ಕಷ್ಟಗಳ ಪರಿಹಾರಕ್ಕೆ ಬಿಜೆಪಿ-ಕಾಂಗ್ರೆಸ್ ಯಾವುದೇ ಕೆಲಸ ಮಾಡಿಲ್ಲ. ಈಗ ಪಾದಯಾತ್ರೆ, ಸಂಕಲ್ಪ ಯಾತ್ರೆ ಅಂತಿದ್ದಾರೆ. ಆದರೆ ನಾವು ಪಂಚರತ್ನ ಕಾರ್ಯಕ್ರಮದಲ್ಲಿ ನಮಗೆ ಅಧಿಕಾರ ಕೊಟ್ಟರೆ ಹೇಗೆ? ಅದನ್ನು ಅನುಷ್ಠಾನ ಮಾಡ್ತೀವಿ ಅಂತ ಜನರ ಮುಂದೆ ಹೇಳಿ, ಒಂದು ಅವಕಾಶ ಕೊಡಿ ಅಂತ ಮನವಿ ಮಾಡ್ತೀವಿ ಎಂದರು.
2023ರ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್‌ಗಿಂತ ಮೊದಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗೋದು ಬಹುತೇಕ ಖಚಿತವಾಗಿದೆ. ನ. 1ರಂದು ಮುಳಬಾಗಿಲಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಜೆಡಿಎಸ್‌ನ ಮೊದಲ ಪಟ್ಟಿ ರಿಲೀಸ್ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದರು. ಆದರೆ ಇಂದು ಪಟ್ಟಿ ರಿಲೀಸ್ ಆಗಿಲ್ಲ ನವ ಕರ್ನಾಟಕ ನಿರ್ಮಾಣಕ್ಕೆ ಮಹಾಯಾತ್ರೆ ಹೆಸರಿನಲ್ಲಿ ಈ ರಥಯಾತ್ರೆ ಕೈಗೊಳ್ಳಲಾಗುತ್ತಿದೆ ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಪಂಚರತ್ನ ಪರಿಪೂರ್ಣ ಪರಿಹಾರ ಎಂದರು.
ಮುಳ ಬಾಗಿಲು ವಿಧಾನಸಭೆ ಕ್ಷೇತ್ರ ದ ಕುರುಡುಮಲೆ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ರಥಯಾತ್ರೆಗೆ ಜೆಡಿಎಸ್ ವರಿಷ್ಟ ಎಚ್ ಡಿ ದೇವೇಗೌಡ ಚಾಲನೆ ನೀಡಿದರು.ಈ ಸಮಾವೇಶದಲ್ಲಿ ಎಚ್ ಡಿಕೆ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ನಿಖಿಲ್ ಕುಮಾರಸ್ವಾಮಿ ಸೇರಿ ಮಾಜಿ ಸಚಿವರು, ಪಕ್ಷದಶಾಸಕರು ಎಲ್ಲ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳು ಭಾಗಿಯಾಗಿದ್ದರು. ಈಗಾಗಲೇ 123 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಫೈನಲ್ ಆಗಿದೆ. ಕಳೆದ ವಾರ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಸಲ್ಲಿಸಲಾಗಿದೆ.