Wednesday, March 22, 2023
spot_img
- Advertisement -spot_img

2023ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದು ಶತಃಸಿದ್ಧ : ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು : ಕಾಂಗ್ರೆಸ್‌, ಬಿಜೆಪಿ ಏನೇ ಮಾಡಿದರೂ ಚುನಾವಣೆಯಲ್ಲಿ ನಾವು ಗೆಲ್ಲುವುದು ಹಾಗೂ 2023ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದು ಶತಃಸಿದ್ಧ’ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೆಪಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್‌ ಗೆದ್ದೇ ಗೆಲ್ಲುತ್ತದೆ. ಜೆಡಿಎಸ್‌ ಗ್ರಾಫ್‌ ಏರುತ್ತಿದ್ದು, 123 ಸ್ಥಾನ ಗೆಲ್ಲಲಿದೆ ಎಂದರು. ಚಾಮರಾಜಪೇಟೆ ಹಿಂದೆ ಯಾವ ತರ ಇತ್ತು, ಬಳಿಕ ದೇವೆಗೌಡರು ಶ್ರಮ ಹಾಕಿ ಎಷ್ಟುಅಭಿವೃದ್ಧಿ ಮಾಡಿದರು ಎಂಬುದು ಎಲ್ಲರಿಗೂ ತಿಳಿದಿದೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಚಾಮರಾಜಪೇಟೆಯು ಜೆಡಿಎಸ್‌ ಗೆಲ್ಲುವ ಮೊದಲ ಕ್ಷೇತ್ರ ಆಗಲಿದೆ ಎಂದರು.

ಬಿಜೆಪಿ, ಕಾಂಗ್ರೆಸ್‌ ಪಕ್ಷಕ್ಕಿಂತ ಜೆಡಿಎಸ್‌ ಬೆಳವಣಿಗೆ ಗ್ರಾಫ್‌ ಮೇಲೆ ಏರುತ್ತಿದೆ. ಇದು ಪಂಚರತ್ನ ಯಾತ್ರೆ ಕಾರ್ಯಕ್ರಮದ ಮೂಲಕ ಗೊತ್ತಾಗಿದೆ. ಇನ್ನು ಕೆಟ್ಟಆಡಳಿತದಿಂದ ಬೆಂಗಳೂರಿನಲ್ಲಿ ಜನರಿಗೆ ರಕ್ಷಣೆ ಇಲ್ಲ ಎಂಬುದು ಜನರಿಗೆ ಅರಿವಾಗಿದೆ. ಇಂದು ಬಿಜೆಪಿ, ಕಾಂಗ್ರೆಸ್‌ ಆಂತರಿಕ ಸಮೀಕ್ಷೆ ನಡೆಸುತ್ತಿವೆ. ಜೆಡಿಎಸ್‌ ಬರೀ 55 ಅಲ್ಲ, 123 ಸ್ಥಾನ ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು .

ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ, ಶಿಕಾರಿಪುರದ ಮಾಜಿ ಶಾಸಕರು, ಅಥಣಿ ಮಾಜಿ ಶಾಸಕರು ಪಕ್ಷಕ್ಕೆ ಸೇರುತ್ತಿದ್ದಾರೆ. ನಮ್ಮ ಎಲ್ಲ ಕಾರ್ಯಕರ್ತರಿಗೂ ಸೂಕ್ತ ಸ್ಥಾನಮಾನ ನೀಡುತ್ತೇವೆ. ನಾವು ಬೆಳೆಯಬೇಕಾದರೆ ಗೊಬ್ಬರ ಹಾಕಬೇಕು. ಹೆಚ್ಚುವರಿ ಗೊಬ್ಬರ ಬೇಕಾದರೆ ತರಬೇಕಾಗುತ್ತದೆ. ನಮ್ಮ ಗುರಿ 123 ಕ್ಷೇತ್ರದಲ್ಲಿ ಗೆದ್ದು, ವಿಧಾನಸೌಧಲ್ಲಿ ಜೆಡಿಎಸ್‌ ಅಧಿಕಾರಕ್ಕೇರಬೇಕು. ದೇವೇಗೌಡರು ಆ ಕಾರ್ಯಕ್ರಮ ನೋಡಬೇಕು. ನಾವು ಅಧಿಕಾರಕ್ಕೆ ಬಂದ ಮೇಲೆ ಕೆಂಪೇಗೌಡ ಪ್ರತಿಮೆಯನ್ನು ವಿಧಾನಸೌಧದಲ್ಲಿ ಸ್ಥಾಪನೆ ಮಾಡುತ್ತೇವೆ ಎಂದು ಘೋಷಿಸಿದರು. ಈ ವೇಳೆ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್‌, ಬಿಜೆಪಿ ಪ್ರಮುಖ ನಾಯಕರನ್ನು ಜೆಡಿಎಸ್‌ಗೆ ಸೇರ್ಪಡೆ ಮಾಡಿಕೊಳ್ಳಲಾಯಿತು.

Related Articles

- Advertisement -

Latest Articles