ವಿಜಯಪುರ: ಜೆಡಿಎಸ್ ಸುಮ್ಮನೆ ಜಾತ್ಯತೀತ ಅಂತ ಹೆಸರು ಇಟ್ಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ನಡೆದ ಹಾಲುಮತ ಸಮಾಜದ ಸಭೆಯಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಪಕ್ಷದ ವಿರುದ್ಧವೇ ಗುಡುಗಿದರು.
ಕಳೆದ ಚುನಾವಣೆಯಲ್ಲಿ ನಾನು ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದೆ 10 ಕ್ಷೇತ್ರಗಳಲ್ಲಿ ಮುಸ್ಲಿಂ, ದಲಿತರಿಗೆ ಒಂದೊಂದು ಸೀಟ್ ಕೊಡಿ ಎಂದು ಕೇಳಿದ್ದೆ, ಆದರೆ ಅವರು ಕೊಡಲಿಲ್ಲ. ಜೆಡಿಎಸ್ ಸುಮ್ಮನೆ ಜಾತ್ಯತೀತ ಅಂತ ಹೆಸರು ಇಟ್ಕೊಂಡಿದ್ದಾರೆ ಎಂದರು.
ಇದನ್ನೂ ಓದಿ: ದೇಶಕ್ಕೆ ಮೋದಿ, ಕರ್ನಾಟಕಕ್ಕೆ ಯಡಿಯೂರಪ್ಪ : ರೇಣುಕಾಚಾರ್ಯ
ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ – ಬಿಜೆಪಿ ಮೈತ್ರಿ ಮಾಹಿತಿಯನ್ನ ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದರೆ ರಾಜ್ಯದ ಜನ ಈ ಮೈತ್ರಿಯನ್ನು ಯಾವ ರೀತಿ ಸ್ವೀಕಾರ ಮಾಡ್ತಾರೆ ಅನ್ನೋದನ್ನು ನೋಡಬೇಕು ಎಂದರು.
ಬಿ.ಕೆ ಪರಿಪ್ರಸಾದ್ ಅಸಮಾಧಾನ ಕುರಿತು ಪ್ರತಿಕ್ರಿಯಿಸಿದ ಅವರು, ಹರಿಪ್ರಸಾದ್ ಅವರಿಗೆ ನಾನು ವಿನಂತಿ ಮಾಡುತ್ತೇನೆ. ನಿಜ ನಿಮ್ಮನ್ನು ಮಂತ್ರಿ ಮಾಡಬೇಕಿತ್ತು ಅನ್ನುತ್ತೀರಿ. ಆದರೆ ಅದು ನಮಗೆ ಸಂಬಂಧವಿಲ್ಲ. ಇಂದು ಈಡಿಗ ಸಮಾಜಕ್ಕೆ ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರಾತಿನಿಧ್ಯ ಕೊಟ್ಟಿದ್ದಾರೆ. ಬಂಗಾರಪ್ಪ ಅವರ ಮಗನೇ ಶಿಕ್ಷಣ ಮಂತ್ರಿಯಾಗಿದ್ದಾರೆ. ಹಾಗಾಗಿ ಕೊಟ್ಟೇ ಇಲ್ಲ ಎನ್ನುವುದು ಸರಿಯಲ್ಲ ಎಂದು ಕಿಡಿಕಾರಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.