ಮಂಡ್ಯ: ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರನ್ನು ಕೂಡಲೇ ನಿಲ್ಲಿಸಬೇಕು ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಜೆಡಿಎಸ್ ನಾಯಕರು ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರಿಗೆ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ರವೀಂದ್ರ ಶ್ರೀಕಂಠಯ್ಯ, ಸುರೇಶ್‌ಗೌಡ, ಡಾ.ಕೆ.ಅನ್ನದಾನಿ, ಶಾಸಕ ಹೆಚ್.ಟಿ.ಮಂಜು ಸೇರಿದಂತೆ ಅನೇಕರು ಸಾಥ್ ನೀಡಿದರು.
ಕಾವೇರಿ ನೀರು ಹಂಚಿಕೆ ವಿವಾದವು ಕರ್ನಾಟಕ ಹಾಗೂ ತಮಿಳುನಾಡು ನಡುವೆ ಬಗೆಹರಿಯದ ಸಮಸ್ಯೆಯಾಗಿದ್ದು, ರಾಜ್ಯದಲ್ಲಿ ಸದ್ಯ ಕಡಿಮೆ ಮಳೆಯ ಪರಿಣಾಮ ಕೆ.ಆರ್.ಎಸ್.ಡ್ಯಾಂನಲ್ಲಿ ನೀರಿನ ಅಭಾವ ಎದುರಾಗಿದೆ. ಹೀಗಿರುವಾಗ ತಮಿಳುನಾಡಿಗೆ ನೀರು ಹಂಚಿಕೆಯಾಗುತ್ತಿರುವುದು ರಾಜ್ಯದ ರೈತರ ಕೆಂಗಣ್ಣಿಗೆ ಗುರಿಯಾಗಿದೆ.
ಇದನ್ನೂ ಓದಿ: ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಹೇಳಿ: ಪ್ರಧಾನಿಗೆ ಸ್ಟಾಲಿನ್ ಪತ್ರ
ರಾಜ್ಯದಿಂದ ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆಯಾಗುತ್ತಿದೆ. ಕಾವೇರಿ ನೀರು ಹಂಚಿಕೆಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಭಾಗಗಳಲ್ಲಿ ಭಾರಿ ಪ್ರತಿಭಟನೆ ಶುರುವಾಗಿದೆ. ಹಲವು ವರ್ಷಗಳಿಂದ ಕಾವೇರಿ ಜಲ ವಿವಾದ ಬಗೆಹರಿಯದ ಸಮಸ್ಯೆಯಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.