ಬೆಂಗಳೂರು: ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆಯನ್ನು ಅನೂರ್ಜಿತಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಚುನಾವಣಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆಯನ್ನು ಅನೂರ್ಜಿತಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಆಗಿರುವುದರಿಂದ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಆದೇಶಕ್ಕೆ ತಡೆ ನೀಡುವಂತೆ ಗೌರಿಶಂಕರ್ ಪರ ವಕೀಲರು ಮನವಿ ಮಾಡಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸಿ.ಗೌರಿಶಂಕರ್ ಅವರನ್ನು ಚುನಾವಣೆಯಿಂದ 6 ವರ್ಷಗಳ ಕಾಲ ಅನರ್ಹಗೊಳಿಸಿ ಕಲಬುರ್ಗಿ ಹೈಕೋರ್ಟ್ ಏಕಸದಸ್ಯಪೀಠ ಆದೇಶ ಹೊರಡಿಸಿದೆ.
ಚುನಾವಣೆ ಅಕ್ರಮ ನಡೆಸಿದ ಕಾರಣಕ್ಕೆ ಶಾಸಕ ಗೌರಿಶಂಕರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿರುವ ಏಕಸದಸ್ಯಪೀಠದ ನ್ಯಾ. ಸುನೀಲ್ ದತ್ತ್ ಯಾದವ್, ಗೌರಿಶಂಕರ್ ಅವರಿಗೆ 6 ವರ್ಷಗಳ ಕಾಲ ಚುನಾವಣೆ ಸ್ಪರ್ಧೆಯಿಂದ ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆ.