ಬಾಗಲಕೋಟೆ: ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಲು ಕೋಲಾರ ಜನರು ತೀರ್ಮಾನಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೆಲ್ತಾರೆ, ಯಾವುದೇ ಸಂಶಯವಿಲ್ಲ ಬರೆದಿಟ್ಟುಕೊಳ್ಳಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಕೋಲಾರ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ಪ್ರಶ್ನೆ ಇಲ್ಲ. ಕೋಲಾರದಲ್ಲಿ ಜೆಡಿಎಸ್ ವಿಜಯವನ್ನು ಜನ ಈಗಾಗಲೇ ಬರೆದಿದ್ದಾರೆ ಎಂದು ಹೇಳಿದರು. ಸಿದ್ಧರಾಮಯ್ಯ ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದರು. ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಲು ಕೋಲಾರ ಜನರು ತೀರ್ಮಾನಿಸಿದ್ದಾರೆ ಎಂದಿದ್ದಾರೆ.
ಬಿಜೆಪಿ, ಕಾಂಗ್ರೆಸ್ನಲ್ಲಿ ಪರಸ್ಪರ ಕಿತ್ತಾಟ ಇದೆಯಲ್ಲ. ನಾನು ವೈಯಕ್ತಿಕವಾಗಿ ಚರ್ಚೆಗೆ ಹೋಗಿಲ್ಲ. ನನ್ನ ಪಂಚರತ್ನ ಯೋಜನೆಗೆ ಬೆಂಬಲ ಕೋರುತ್ತಿದ್ದೇನೆ. ಯಾವ ಪಕ್ಷದಲ್ಲಿ ಯಾರು ಟೀಕೆ ಮಾಡ್ತಾರೆ ಅವರಿಗೆ ಬಿಟ್ಟಿದ್ದೇನೆ ಎಂದು ಹೇಳಿದರು. ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಜನರ ಸಮಸ್ಯೆ ಬಗ್ಗೆ ಚಿಂತೆ ಇಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ನಡೆದಿಲ್ವಾ ಎಂದು ಪ್ರಶ್ನಿಸಿದರು.
ಬಡವರ ಆದಾಯ ಹೆಚ್ಚಿಸುವುದೇ ಪಂಚರತ್ನ ಯಾತ್ರೆ ಮೂಲ ಉದ್ದೇಶ ಎಂದರು.ಕೋಲಾರದಲ್ಲಿ ಸಿದ್ದು ಸ್ಪರ್ಧೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೆಡಿಎಸ್ ನಡೆ ಏನು ಎಂಬ ಕುತೂಹಲ ಸಹಜವಾಗಿ ಕೆರಳಿಸಿದೆ.