ಬೆಂಗಳೂರು: ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕಿ.ಮೀ ದೂರ ಬೃಹತ್ ರೋಡ್ ಶೋ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಆ ರೋಡ್‌ಶೋದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರನ್ನು ಕರೆದುಕೊಂಡು ಹೋಗಲಾಗುವುದು ಎಂದು ಮಾಹಿತಿ ನೀಡಿದರು. ಇದು ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿಯೇ ಮಹೋನ್ನತ ಸಮಾವೇಶ ಆಗಲಿದೆ. ಈವರೆಗೂ ಯಾರೂ ಮಾಡಿರದಂಥ ಸಮಾವೇಶ ಅದಾಗಿರುತ್ತದೆ. 60 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಇದೇ ತಿಂಗಳ 11 ಅಥವಾ 14ರಂದು ಪ್ರಕಟಿಸಲಾಗುವುದು ಎಂದರು.
ಅಂದಹಾಗೆ ಮಾರ್ಚ್ 26 ರಂದು ಬೆಂಗಳೂರಿನ ಕುಂಬಳಗೋಡಿನಿಂದ ಮೈಸೂರಿನವರೆಗೆ 100 ಕಿಲೋಮೀಟರ್ ತೆರೆದ ವ್ಯಾನ್‌ನಲ್ಲಿ ಪಕ್ಷದ ವರಿಷ್ಠ ಹೆಚ್‌ಡಿ ದೇವೇಗೌಡರನ್ನು ಕರೆದುಕೊಂಡು ಹೋಗಲಿದೆ. ಹಳೆ ಮೈಸೂರು ಭಾಗದಲ್ಲಿ ಅಸ್ತಿತ್ವ ಸ್ಥಾಪಿಸಲು ಬಿಜೆಪಿ ಹಪಹಪಿಸುತ್ತಿದೆ.
ಈ ನಡುವೆ ಜೆಡಿಎಸ್ ತನ್ನ ಭದ್ರಕೋಟೆಯನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ದೇವೇಗೌಡರನ್ನೇ ಅಖಾಡಕ್ಕೆ ಇಳಿಸುತ್ತಿದೆ. ಅಷ್ಟೇ ಅಲ್ಲದೇ ಹೆಚ್ ಡಿ ದೇವೇಗೌಡ ಆರೋಗ್ಯ ವೃದ್ಧಿಗೆ ಮಹಾಯಾಗ ನಡೆಸಲಾಗ್ತಿದೆ.