ಬೆಂಗಳೂರು : ಗ್ಯಾಸ್ ಬೆಲೆ ಏರಿಕೆ ಹಿನ್ನೆಲೆ ಜೆಡಿಎಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಪಕ್ಷ, ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಗೆ 50 ರೂಪಾಯಿ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಗೆ 350.50 ರೂಪಾಯಿಗೆ ಹೆಚ್ಚಾಗಿದೆ. ದೇಶದ ಆರ್ಥಿಕತೆ ಕಷ್ಟದಲ್ಲಿರುವಾಗ, ಗ್ಯಾಸ್ ಬೆಲೆ ಏರಿಕೆ ಎಷ್ಟು ಸರಿ? ಜನತೆಯ ಜೇಬಿಗೆ ಕತ್ತರಿ ಎಷ್ಟು ಸರಿ? ಎಂದು ಪ್ರಶ್ನಿಸಿದೆ.
ಒಂದು ಕಡೆ ಸುಳ್ಳು ಹೇಳಿಕೊಂಡು ಬದುಕಿ, ಜನರನ್ನು ತಪ್ಪುದಾರಿಗೆ ಎಳೆಯುತ್ತಿರುವ ಕೇಂದ್ರ ಸರ್ಕಾರ ದೇಶದ ಆರ್ಥಿಕತೆಯ ಹಳಿ ತಪ್ಪುತ್ತಿದೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದೆ.
ಗ್ರಾಮೀಣ ಮಹಿಳೆಯರು ಸೌದೆ ಬಳಕೆಗೆ ಹಿಂದಿರುಗಿದ್ದಾರೆ. ಇದೇ ವೇಳೆ, ಮತ್ತೆ ಗೃಹ ಬಳಕೆಯ ಸಿಲಿಂಡರ್ ಬೆಲೆ ಏಕಾಏಕಿ ಏರಿಸಿದರೆ ಹೇಗೆ? ಕೇಂದ್ರ ಸರ್ಕಾರ ಯಾರಿಗಾಗಿ ಕೆಲಸ ಮಾಡುತ್ತಿದೆ? ಎಂದು ವಾಗ್ದಾಳಿ ನಡೆಸಿದೆ. ಇನ್ನೂ ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಕಿರುಕುಳ ಕೊಡತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.