ಚನ್ನ ಪಟ್ಟಣ : ಕುಮಾರಸ್ವಾಮಿ ಇಲ್ಲಿಯ ಶಾಸಕರಾದ ಮೇಲೆ ತಾಲ್ಲೂಕಿಗೆ ₹1500 ಕೋಟಿಗೂ ಹೆಚ್ಚಿನ ಅನುದಾನ ಲಭಿಸಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಚನ್ನಪಟ್ಟಣ ತಾಲ್ಲೂಕಿನ ರಸ್ತೆ, ಸೇತುವೆ, ನೀರಾವರಿ, ಆಸ್ಪತ್ರೆ, ಶಾಲಾ ಕಾಲೇಜು ಕಟ್ಟಡ ನಿರ್ಮಾಣ, ಮೂಲ ಸೌಲಭ್ಯ ಸೇರಿದಂತೆ ಅನೇಕ ಕಾಮಗಾರಿಗಳು ಅಭಿವೃದ್ಧಿ ಕಂಡಿದೆ ಎಂದರು. ಚನ್ನಪಟ್ಟಣ ಕ್ಷೇತ್ರದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟಿಸಲು ಪ್ರತಿ ಜಿ. ಪಂ ವ್ಯಾಪ್ತಿಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿರುವುದಾಗಿ ತಿಳಿಸಿದರು.
ತಾಲ್ಲೂಕಿನಲ್ಲಿ ಕಳೆದ 20 ವರ್ಷಗಳಿಂದ ಆಗದ ಅಭಿವೃದ್ಧಿ ಕೇವಲ ನಾಲ್ಕೂವರೆ ವರ್ಷದಲ್ಲಿ ಆಗಿದೆ ಎಂದು ತಿಳಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ರೋಸಿ ಹೋಗಿರುವ ರಾಜ್ಯದ ಜನತೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಬಹುಮತ ನೀಡಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮಾರ್ಗದರ್ಶನದಲ್ಲಿ ಎಚ್.ಡಿ. ಕುಮಾರಸ್ವಾಮಿ ಈಗಾಗಲೇ ರಾಜ್ಯವ್ಯಾಪಿ ಪ್ರವಾಸ ಆರಂಭಿಸಿದ್ದಾರೆ. ನಾಡಿನ ಸಮಸ್ತ ಜನತೆಯ ಹಿತದೃಷ್ಟಿಯಿಂದ ಆರೋಗ್ಯ, ಶಿಕ್ಷಣ, ಯುವಕರಿಗೆ ಉದ್ಯೋಗ, ನೀರಾವರಿ ಯೋಜನೆ ಸೇರಿದಂತೆ ಹಲವು ಜನಪರ, ರೈತಪರ ಯೋಜನೆಗಳನ್ನು ಸಿದ್ಧಪಡಿಸಿದ್ದಾರೆ ಎಂದರು