ಚಿತ್ರದುರ್ಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ ಕೈಗೊಂಡಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗಿಯಾಗಲಿದ್ದಾರೆ.
ಇಂದು ಬಳ್ಳಾರಿಯ ಸಂಡೂರು ತಾಲೂಕಿನ ತೋರಣಗಲ್ನಲ್ಲಿರುವ ಜಿಂದಾಲ್ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ.ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 2:15ಕ್ಕೆ ಚಿತ್ರದುರ್ಗದ ಮುರುಘಾಮಠ ಬಳಿಯ ಹೆಲಿಪ್ಯಾಡ್ಗೆ ಜೆ.ಪಿ ನಡ್ಡಾ ಆಗಮಿಸಲಿದ್ದಾರೆ.
ಬಳಿಕ ರಸ್ತೆ ಮೂಲಕ ಚಳ್ಳಕೆರೆ ಪಟ್ಟಣಕ್ಕೆ ತೆರಳಲಿದ್ದಾರೆ. ಅಂದಹಾಗೆ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಬಿಜೆಪಿ ಸೇರ್ಪಡೆಯಾಗಿದ್ದು, ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ್ದರು ಬಹುಷ: ಈ ವಿಚಾರವಾಗಿ ಇಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆಂಧ್ರ ಬಿಜೆಪಿ ರಾಜ್ಯಾಧ್ಯಕ್ಷ ಪ್ರಚಾರದಲ್ಲಿ ಭಾಗಿಯಾಗುವ ಮೂಲಕ ಕರ್ನಾಟಕ ಮತ್ತು ಆಂದ್ರ ಗಡಿ ಭಾಗದಲ್ಲಿ ವಾಸಿಸುವ ತೆಲಗು ಜನರ ಮತಗಳನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದೆ.
ಜೆ.ಪಿ ನಡ್ಡಾಗೆ ಸೋಮು ವೀರರಾಜು, ಬಿ.ಶ್ರೀರಾಮುಲು ಜೊತೆಯಾಗಲಿದ್ದಾರೆ. ಜೊತೆಗೆ ಆಂಧ್ರ ಬಿಜೆಪಿ ರಾಜ್ಯಾಧ್ಯಕ್ಷರು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.