ಬೆಂಗಳೂರು: ಬೆಂಗಳೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಆಗಮಿಸಲಿದ್ದಾರೆ. ಸಂಜೆ 5.20ಕ್ಕೆ ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿಳಿಯಲಿದ್ದು, ಬಳಿಕ ಕೆ.ಆರ್.ಪುರಂನಲ್ಲಿ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ರೋಡ್ ಶೋ ನಡೆಸಲಿದ್ದಾರೆ. ನಂತರ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ.
ಮಾರ್ಚ್ 12ರಂದು ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು,ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆ ವೇಳೆ ಮೋದಿ ರೋಡ್ ಶೋ ನಡೆಸಲಿದ್ದಾರೆ. ಭದ್ರತಾ ಹಿನ್ನೆಲೆ 15 ಕಿಲೋ ಮೀಟರ್ ವರೆಗೂ ಡ್ರೋನ್ ಹಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಡ್ರೋನ್ ಅಥವಾ ಹೆಲಿಕ್ಯಾಮ್ ಹಾರಿಸಿದರೆ ಕಾನೂನು ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.
ಪ್ರಧಾನಿ ರ್‍ಯಾಲಿಯಲ್ಲಿ 40 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಪ್ರಧಾನ ಮಂತ್ರಿಗಳ ವಿಶೇಷ ಭದ್ರತಾ ತಂಡ ಭದ್ರತೆ ಪರಿಶೀಲನೆ ಮಾಡಲಿದ್ದಾರೆ. ಇನ್ನೂ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲೇ ಹೆಚ್ಚು ಮರಗಳ ಕೊಂಬೆಗಳನ್ನು ಕಡಿಯಲಾಗಿದೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಮರಗಳನ್ನು ಟ್ರಿಮ್ಮಿಂಗ್ ಮಾಡಿದ್ದು ಎಷ್ಟು ಸರಿ? ಯಾರಿಗೂ ಸಮಸ್ಯೆಯಾಗದ ಮರದ ಕೊಂಬೆಗಳನ್ನು ಕತ್ತರಿಸಿದ್ದೇಕೆ ಅಂತಾ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.