ನವದೆಹಲಿ: ‘ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದವರಿಗೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ’ ಅಂತಹವರನ್ನು ಪ್ರಜಾಪ್ರಭುತ್ವ ರಾಷ್ಟ್ರದಿಂದ ಗಂಟುಮೂಟೆ ಕಟ್ಟಿಸಿ ದೂರಕ್ಕೆ ಕಳುಹಿಸಬೇಕು ಎಂದು ಬಿಜೆಪಿ ಅಧ್ಯಕ್ಷ ನಡ್ಡಾ ಹೇಳಿದರು.
‘ರಾಷ್ಟ್ರೀಯ ಯುವ ಸಂಸತ್’ ಅನ್ನು ಉದ್ಘಾಟಿಸಿ ನಂತರ ಮಾತನಾಡಿದರು. ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ಎಲ್ಲ ಮಿತಿಗಳನ್ನು ಮೀರಿದ್ದು, ಭಾರತದ ಜನರು ಅವರ ಮಾತನ್ನು ಕೇಳುವುದಿಲ್ಲ. ಆದರೆ, ಅವರನ್ನು ಸಹಿಸಿಕೊಳ್ಳುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್ ಮಾನಸಿಕವಾಗಿ ದಿವಾಳಿಯಾಗಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳಿ ಭಾರತದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಲು ವಿದೇಶಿ ಶಕ್ತಿಗಳನ್ನು ‘ಪ್ರಚೋದನೆ’ ಮಾಡಿದ್ದಾರೆ’ ಎಂದು ಆರೋಪಿಸಿದರು.ರಾಹುಲ್ ಗಾಂಧಿ ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ನಾಚಿಕೆಗೇಡಿನ ಹೇಳಿಕೆಯಿಂದ ರಾಷ್ಟ್ರವನ್ನು ಅವಮಾನಿಸಿಲ್ಲ. ಬದಲಿಗೆ ನಮ್ಮ ದೇಶದಲ್ಲಿ ಮಧ್ಯಪ್ರವೇಶಿಸುವಂತೆ ವಿದೇಶಿ ರಾಷ್ಟ್ರಗಳನ್ನು ಆಹ್ವಾನಿಸಿದ್ದಾರೆ ಎಂದು ಹೇಳಿದರು.