Friday, September 29, 2023
spot_img
- Advertisement -spot_img

ಕೋವಿಡ್ ಅಕ್ರಮ ನ್ಯಾಯಾಂಗ ತನಿಖೆ: ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಹುನ್ನಾರ ಎಂದ ಬೊಮ್ಮಾಯಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ನ್ಯಾಯಾಂಗ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ನೀಡಿದ್ದು, ‘ಇದರಲ್ಲಿ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ, ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಹುನ್ನಾರ ಇದೆ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ನಗರದಲ್ಲಿ ಮಾತನಾಡಿದ ಬೊಮ್ಮಾಯಿ, ‘ವಿಚಾರಣೆ ಆಗಲಿ, ತನಿಖೆ ಆಗಲಿ ಇದರಲ್ಲಿ ಆಶ್ಚರ್ಯ ಏನಿಲ್ಲ; ಈಗಾಗಲೇ ಪಿಎಸ್ಐ ನೇಮಕಾತಿ ಪ್ರಕರಣದ ತನಿಖೆ ನಡೆದು ಚಾರ್ಜ್‌ಶೀಟ್ ಸಲ್ಲಿಸಿಯಾಗಿದೆ. ಇವರು ಚಾರ್ಜ್‌ಶೀಟ್‌ನಲ್ಲಿ ಇರುವವರ ರಕ್ಷಣೆ ಮಾಡ್ತಾರಾ ಅಥವಾ ಇನ್ನೊಂದು ಆಯಾಮದಲ್ಲಿ ತನಿಖೆ ಮಾಡ್ತಾರಾ? ಪಿಎಸ್ಐ ಪ್ರಕರಣದ ತನಿಖೆಯೂ ಪೊಲೀಸರೇ ಮಾಡಬೇಕು. ಯಾವ ರೀತಿ ತನಿಖೆ ಮಾಡ್ತಾರೆ ಅಂತ ನೋಡೋಣ’ ಎಂದರು.

ಇದನ್ನೂ ಓದಿ; ‘ಗ್ಯಾರಂಟಿ ಸರ್ಕಾರ’ಕ್ಕೆ 100 ದಿನ; ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

‘ಇನ್ನು 40% ಆರೋಪದಲ್ಲಿ ನಿರ್ದಿಷ್ಟ ಪ್ರಕರಣ ಇಲ್ಲ, ದಾಖಲೆ ಇಲ್ಲ. ಎರಡು ವರ್ಷವಾದರೂ ಅವರು ದಾಖಲೆ ಕೊಟ್ಟಿಲ್ಲ. ಲೋಕಾಯುಕ್ತದ ಎದುರು ಹೆಚ್ಚಿನ ಟೆಂಡರ್ ಕೊಟ್ಟಿರುವ ಹಲವು ಪ್ರಕರಣಗಳು ಇವೆ. ಇವುಗಳನ್ನು ತನಿಖೆಗೆ ಕೊಡ್ತಾರಾ? ಹೊಸ ದೂರು ಕೊಟ್ರೆ ಇವರು ಸೇರಿಸಿಕೊಳ್ತಾರಾ’ ಎಂದು ಪ್ರಶ್ನಿಸಿದರು.

‘ಭ್ರಷ್ಟಾಚಾರ ಯಾವತ್ತಿದ್ರೂ ಭ್ರಷ್ಟಾಚಾರವೇ, ಅವರ ಕಾಲದ ಆರೋಪಗಳನ್ನು ತನಿಖೆ ಮಾಡ್ತಾರಾ? ನಮ್ಮ ಕಾಲದ ಆರೋಪಗಳನ್ನು ತನಿಖೆ ಮಾಡಿ ಅಂತ ಮುಕ್ತವಾಗಿ ಹೇಳಿದ್ದೇವೆ. ಆದರೆ, ಅವರ ಕಾಲದ ಆರೋಪಗಳ ಬಗ್ಗೆಯೂ ತನಿಖೆ ಮಾಡಲಿ ಅದಕ್ಯಾಕೆ ಹಿಂದೇಟು ಹಾಕ್ತಿದಾರೆ? ಇದರಲ್ಲಿ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ, ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಹುನ್ನಾರ ಇದರ ಹಿಂದೆ ಇದೆ’ ಎಂದು ವಾಗ್ದಾಳಿ ನಡೆಸಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles