ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಮಾಡಲಾಗಿದೆ.
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರರೂಢರಾಗಿರುವ ಸಿದ್ದರಾಮಯ್ಯ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವಿ ಪ್ರಭಾಕರ್, ಕಳೆದ ಹತ್ತು ವರ್ಷಗಳಿಂದಲೂ ಸಿದ್ದರಾಮಯ್ಯ ಬಳಿ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಕ ಮಾಡಲಾಗಿದೆ.
ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ, ಸಿಎಂ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಕೆ.ವಿ. ಪ್ರಭಾಕರ್ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನವನ್ನೂ ಸಹ ನೀಡಲಾಗಿದ್ದು, ಸಚಿವರಿಗೆ ಸಿಗುವ ಎಲ್ಲ ಸೌಲಭ್ಯಗಳು ಅವರಿಗೆ ಸಿಗಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಟಿವಿ ಸುನಂದಮ್ಮ ಅವರು ಆದೇಶ ಹೊರಡಿಸಿದ್ದಾರೆ.